ಸೇತುವೆಯಿಂದ ಪ್ರಪಾತಕ್ಕೆ ಬಿದ್ದ ಕಾರು: ಮಹಾರಾಷ್ಟ್ರ ಶಾಸಕನ ಮಗ ಸೇರಿ 7 ಜನ ಸಾವು

ನವದೆಹಲಿ: ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಬಿಜೆಪಿ ಶಾಸಕ ವಿಜಯ್ ರಹಂಗ್ಡೇಲ್ ಅವರ ಪುತ್ರ ಆವಿಷ್ಕರ್ ರಹಂಗ್ಡೇಲ್ ಸೇರಿದಂತೆ ಏಳು ಮಂದಿ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಸೆಲ್ಸುರಾ ಗ್ರಾಮದ ಬಳಿ ದಿಯೋಲಿಯಿಂದ ವಾರ್ಧಾ ಕಡೆಗೆ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ನೇರವಾಗಿ ಕೆಳಗೆ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ಎಲ್ಲಾ ಏಳು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೃತರನ್ನು ನೀರಜ್ ಚೌಹಾಣ್, ನಿತೇಶ್ ಸಿಂಗ್, ವಿವೇಕ್ ನಂದನ್, ಪ್ರತ್ಯೂಷ್ ಸಿಂಗ್, ಶುಭಂ ಜೈಸ್ವಾಲ್, ಪವನ್ ಶಕ್ತಿ ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳು ವಾರ್ಧಾದ ಸಾವಂಗಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಪ್ರಧಾನಿ ಸಂತಾಪ: ಕಾರು ಅಪಘಾತದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಮೃತರ ಕುಟುಂಬಕ್ಕಾಗಿ ತಲಾ ₹ 2 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಈ ಕುರಿತು ಪ್ರಧಾನ ಮಂತ್ರಿಗಳ ಕಚೇರಿಯು ಟ್ವೀಟ್ ಮಾಡಿದೆ.
PM Modi announces Rs. 2 lakh each from PMNRF for the next of kin of those who have lost their lives in the accident near Selsura, Maharashtra. Injured to be given Rs. 50,000: Prime Minister's Office https://t.co/nFuhX61bHZ
— ANI (@ANI) January 25, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.