ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತನ ಮಗ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದು ದೇಶಕ್ಕೆ ಹೆಮ್ಮೆಯ ಕ್ಷಣ: ಪ್ರಧಾನಿ

Last Updated 6 ಆಗಸ್ಟ್ 2022, 16:54 IST
ಅಕ್ಷರ ಗಾತ್ರ

ನವದೆಹಲಿ: ನೂತನ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ರೈತನ ಮಗ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವುದು ದೇಶಕ್ಕೆ ಹೆಮ್ಮೆಯ ಕ್ಷಣ ಎಂದು ಹೇಳಿದ್ದಾರೆ.

ಕಳೆದ 6 ಉಪರಾಷ್ಟ್ರಪತಿ ಚುನಾವಣೆಗಳಿಗೆ ಹೋಲಿಸಿದರೆ ಅತ್ಯಧಿಕ ಶೇಕಡ 74ರಷ್ಟು ಮತಗಳನ್ನು ಪಡೆದು ವಿಜಯಶಾಲಿಯಾದ ಧನಕರ್ ಅವರನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ನಿವಾಸದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಧನಕರ್ ಅವರಿಗೆ ಮತದಾನ ಮಾಡಿದ ಎಲ್ಲ ಸಂಸದರಿಗೂ ಮೋದಿ ಧನ್ಯವಾದ ಹೇಳಿದರು.

‘ನಾವು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂಭ್ರಮದಲ್ಲಿರುವಾಗ, ಅದ್ಬುತ ಕಾನೂನು ಜ್ಞಾನ ಮತ್ತು ಬುದ್ಧಿಜೀವಿಯಾಗಿರುವ ರೈತನ ಮಗನನ್ನು ದೇಶದ ಉಪ ರಾಷ್ಟ್ರಪತಿಯಾಗಿ ಆಯ್ಕೆ ಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

‘ಪಕ್ಷದ ಅದ್ಭುತ ಬೆಂಬಲದೊಂದಿಗೆ ಭಾರತದ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾದ ಶ್ರೀ ಜಗದೀಪ್ ಧನಕರ್ ಜಿ ಅವರಿಗೆ ಅಭಿನಂದನೆಗಳು. ಅವರು ಅತ್ಯುತ್ತಮ ಉಪ ರಾಷ್ಟ್ರಪತಿಯಾಗುತ್ತಾರೆ ಎಂಬ ವಿಶ್ವಾಸವಿದೆ. ಅವರ ಬುದ್ಧಿವಂತಿಕೆಯಿಂದ ನಮ್ಮ ರಾಷ್ಟ್ರವು ಮಹತ್ತರವಾದ ಲಾಭವನ್ನು ಪಡೆಯುತ್ತದೆ’ಎಂದು ಅವರು ಹೇಳಿದ್ದಾರೆ.

ಧನಕರ್ ಅವರು 528 ಮತಗಳನ್ನು ಪಡೆದರೆ, ವಿರೋಧ ಪಕ್ಷಗಳ ಅಭ್ಯರ್ಥಿ ಮಾರ್ಗರೇಟ್ ಆಳ್ವ ಅವರು 182 ಮತಗಳನ್ನು ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT