ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದೂವರೆ ವರ್ಷದಲ್ಲಿ 10 ಲಕ್ಷ ಜನರಿಗೆ ಉದ್ಯೋಗ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

Last Updated 14 ಜೂನ್ 2022, 7:51 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಮುಂದಿನ ಒಂದೂವರೆ ವರ್ಷದಲ್ಲಿ ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ 10 ಲಕ್ಷ ಜನರನ್ನು ನೇಮಕ ಮಾಡಿಕೊಳ್ಳುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೂಚಿಸಿದ್ದಾರೆ.

ಮಂಗಳವಾರ ಪ್ರಧಾನ ಮಂತ್ರಿ ಕಚೇರಿ ಈ ಬಗ್ಗೆ ಟ್ವೀಟ್‌ ಮಾಡಿದೆ. ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳು ಹಾಗೂ ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲಗಳ ಸ್ಥಿತಿಗತಿಯ ಪರಾಮರ್ಶೆ ನಡೆಸಿದ ಬಳಿಕ ಮೋದಿ ಅವರು ಈ ನಿರ್ದೇಶನ ನೀಡಿದ್ದಾರೆ ಎಂದುಪ್ರಧಾನ ಮಂತ್ರಿ ಕಚೇರಿ (ಪಿಎಂಒ) ತಿಳಿಸಿದೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ,ಐಎಂಐಎಂಎಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಒವೈಸಿ, ಟಿಎಂಸಿಯ ಮಮತಾ ಬ್ಯಾನರ್ಜಿ ಸೇರಿದಂತೆ ವಿಪಕ್ಷಗಳು ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಳವಾಗುತ್ತಿದೆ ಎಂದು ಟೀಕೆ ಮಾಡುತ್ತಿರುವಬೆನ್ನಲ್ಲೇ ಪ್ರಧಾನಿ ಮೋದಿ ಅವರು ಮಹತ್ವದ ಘೋಷಣೆ ಮಾಡಿದ್ದಾರೆ.

ಉದ್ಯೋಗಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಕಾರ್ಯಪ್ರವೃತ್ತರಾಗಿದ್ದು,ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ಜನರನ್ನು ನೇಮಿಸಿಕೊಳ್ಳಲಾಗುವುದು. ಪ್ರಧಾನ ಮಂತ್ರಿಗಳುನೇಮಕಾತಿ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ಟ್ವೀಟ್‌ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT