ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬುಡಕಟ್ಟು ಸಮಾವೇಶ: 15ರಂದು ಭೋಪಾಲ್‌ಗೆ ಪ್ರಧಾನಿ ಭೇಟಿ ಸಂಭವ

Last Updated 3 ನವೆಂಬರ್ 2021, 8:27 IST
ಅಕ್ಷರ ಗಾತ್ರ

ಭೋಪಾಲ್: ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಜನ್ಮದಿನದ ಅಂಗವಾಗಿ ನವೆಂಬರ್ 15ರಂದು ಇಲ್ಲಿ ನಡೆಯಲಿರುವ ‘ಜನ್‌ಜಾತಿಯ ಬೃಹತ್‌ ಸಮಾವೇಶ‘ದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಮಧ್ಯಪ್ರದೇಶ ಸರ್ಕಾರದ ಪ್ರಕಟಣೆ ತಿಳಿಸಿದೆ.

ಇದೇ ವೇಳೆ, ನಗರದಲ್ಲಿ ನಿರ್ಮಾಣ ಮಾಡಿರುವ ವಿಶ್ವದರ್ಜೆಯ ಹಬೀಬ್‌ಗಂಜ್ ರೈಲು ನಿಲ್ದಾಣವನ್ನು ಪ್ರಧಾನಿಯವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಸಮಾವೇಶದಲ್ಲಿ ಬುಡಕಟ್ಟು ಸಮುದಾಯದ ಸ್ವ-ಸಹಾಯ ಗುಂಪುಗಳು ಸಿದ್ಧಪಡಿಸಿದ ಉತ್ಪನ್ನಗಳ ಪ್ರದರ್ಶನವನ್ನು ಸಹ ಆಯೋಜಿಸಲಾಗುವುದು ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಧಾನಿಯವರು ರೈಲ್ವೆ ನಿಲ್ದಾಣದ ಉದ್ಘಾಟನೆಗೆ ಆಗಮಿಸಿದಾಗ ನಿಲ್ದಾಣದಲ್ಲಿರುವ ಸೌಲಭ್ಯಗಳನ್ನು ವಿವರಿಸುವಂತಹ ಕಿರುಚಿತ್ರವೊಂದನ್ನು ಪ್ರದರ್ಶಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

ಈ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮಂಗಳವಾರ ಸಮಾವೇಶದ ಸಿದ್ಧತೆಗಳು ಮತ್ತುಹಬೀಬ್‌ಗಂಜ್ ರೈಲು ನಿಲ್ದಾಣದಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಸಮಾವೇಶದಲ್ಲಿ ಬುಡಕಟ್ಟು ಸಮುದಾಯದ ಸಂಸ್ಕೃತಿ, ಸಂಪ್ರದಾಯ ಮತ್ತು ಜೀವನದ ಮೌಲ್ಯಗಳನ್ನು ಪರಿಚಯಿಸುವಂತಹ ಕಾರ್ಯಕ್ರಮಗಳನ್ನು ರೂಪಿಸಲು ಅಧಿಕಾರಿಗಳಿಗೆ ಚೌಹಾಣ್ ನಿರ್ದೇಶನ ನೀಡಿದರು.

ಇದಕ್ಕೂ ಮುನ್ನ ಪ್ರತಿ ವರ್ಷ ಬಿರ್ಸಾ ಮುಂಡಾ ಜನ್ಮ ದಿನವಾದ ನವೆಂಬರ್ 15 ಅನ್ನು ‘ಜನ್ ಜಾತಿಯ ದಿವಸ್‌‘ ಆಗಿ ಆಚರಿಸುವಂತೆ ಚೌಹಾಣ್ ಘೋಷಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT