ಮುಂಬೈ: ನಗರದಿಂದ ಸೊಲ್ಲಾಪುರ ಮತ್ತು ಸಾಯಿನಗರ ಶಿರಡಿಗೆ ಸಂಪರ್ಕಿಸುವ ಎರಡು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಶುಕ್ರವಾರ ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.
ಮಧ್ಯಾಹ್ನ ಮುಂಬೈಗೆ ಬಂದಿಳಿದ ಪ್ರಧಾನಿ ಮೋದಿ, ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ವಿಶ್ವ ಪಾರಂಪರಿಕ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ಗೆ ಚಾಲನೆ ನೀಡಿದರು
ಎರಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಮಹಾರಾಷ್ಟ್ರದ ಪ್ರಮುಖ ಯಾತ್ರಾ ಕೇಂದ್ರಗಳನ್ನು ಸಂಪರ್ಕಿಸುತ್ತವೆ ಮತ್ತು ಧಾರ್ಮಿಕ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ-ಸೋಲಾಪುರ ವಂದೇ ಭಾರತ್ ರೈಲು, ಸಿದ್ಧೇಶ್ವರ, ಅಕ್ಕಲಕೋಟ್, ತುಳಜಾಪುರ, ಪಂಢರಾಪುರ ಮತ್ತು ಸುತ್ತಮುತ್ತಲಿನ ಧಾರ್ಮಿಕ ಕ್ಷೇತ್ರಗಳ ಸಂಪರ್ಕ ಸುಲಭವಾಗಿಸಲಿದೆ.
ಅದೇ ರೀತಿ, ಮುಂಬೈ-ಸಾಯಿನಗರ ಶಿರಡಿ ವಂದೇ ಭಾರತ್ ರೈಲು ತ್ರಯಂಬಕೇಶ್ವರ, ಶಿರಡಿಯ ಸಾಯಿಬಾಬಾ ದೇವಸ್ಥಾನ ಸೇರಿದಂತೆ ಇತರ ಪ್ರಮುಖ ಸ್ಥಳಗಳಿಗೆ ಹೋಗುವ ಭಕ್ತರಿಗೆ ಅನುಕೂಲ ಕಲ್ಪಿಸಲಿದೆ.
ಇದು ಮೂರು ವಾರಗಳಲ್ಲಿ ಮುಂಬೈಗೆ ಪ್ರಧಾನಿ ಮೋದಿಯವರ ಎರಡನೇ ಭೇಟಿಯಾಗಿದೆ. ಜನವರಿ 19 ರಂದು ಅವರು ಮುಂಬೈ ಮೆಟ್ರೋ ಲೈನ್ 2 ಮತ್ತು ಲೈನ್ 7ಕ್ಕೆ ಚಾಲನೆ ನೀಡಿ, ₹38,000 ಕೋಟಿ ಮೌಲ್ಯದ ಮೂಲಸೌಕರ್ಯ ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.