ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿತೀಶ್ ಕುಮಾರ್‌, ಸ್ಟಾಲಿನ್ ಜನ್ಮದಿನಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ

Last Updated 1 ಮಾರ್ಚ್ 2023, 5:42 IST
ಅಕ್ಷರ ಗಾತ್ರ

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಜನ್ಮದಿನದ ಶುಭಾಶಯ ಕೋರಿದ್ದಾರೆ.

ಜೆಡಿಯು ನಾಯಕರಾಗಿರುವ ನಿತೀಶ್ ಕುಮಾರ್ 72ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಡಿಎಂಕೆ ಪಕ್ಷದ ನಾಯಕರಾಗಿರುವ ಸ್ಟಾಲಿನ್ 70ನೇ ವರ್ಷದ ಸಂಭ್ರಮದಲ್ಲಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ಆರೋಗ್ಯಕರ ಜೀವನಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ ಮಾಡಿರುವ ಮೋದಿ ಅವರು, ಸ್ಟಾಲಿನ್‌ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ದೇವರು ಆರೋಗ್ಯಕರ ಜೀವನವನ್ನು ಆಶೀರ್ವದಿಸಲಿ ಎಂದು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT