ಮಂಗಳವಾರ, ಮಾರ್ಚ್ 2, 2021
19 °C

ಸೇನಾ ದಿನ: ಸೈನಿಕರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಸೇನಾ ದಿನದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸೈನಿಕರಿಗೆ ಶುಭಾಶಯ ಕೋರಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಸೇನಾ ದಿನದಂದು ದೇಶದ ಸೈನಿಕರು ಮತ್ತು ಅವರ ಕುಟುಂಬಸ್ಥರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಮ್ಮ ಸೈನಿಕ ಪಡೆ ಶಕ್ತಿಶಾಲಿ, ಧೈರ್ಯಶಾಲಿ ಮತ್ತು ದೃಢತೆಯಿಂದ ಕೂಡಿದೆ. ಸೈನಿಕರು ದೇಶದ ಜನರು ಹೆಮ್ಮೆಪಡುವಂತೆ ಮಾಡಿದ್ದಾರೆ. ನಾನು ಎಲ್ಲರ ಪರವಾಗಿ ಭಾರತೀಯ ಸೇನೆ ವಂದಿಸುತ್ತೇನೆ’ ಎಂದು ಹೇಳಿದ್ದಾರೆ.

1949ರ ಜ.15ರಂದು ಲೆಫ್ಟಿನೆಂಟ್ ಜನರಲ್ ಮಾರ್ಷಲ್‌ ಕೆ.ಎಂ.ಕಾರ್ಯಪ್ಪ ಅವರು ಸೇನಾ ದಂಡನಾಯಕರಾಗಿ ಅಧಿಕಾರ ಸ್ವೀಕರಿಸಿದ್ದರು. ಬ್ರಿಟಿಷರು ಸೇನೆಯ ಅಧಿಕಾರವನ್ನು ಹಸ್ತಾಂತರಿಸಿದ ಈ ಐತಿಹಾಸಿಕ ದಿನವನ್ನು ಸೇನಾ ದಿನ ಎಂದು ಆಚರಿಸಲಾಗುತ್ತದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು