International Women's Day| ಭಾರತದ ನಾರಿಶಕ್ತಿಯನ್ನು ಕೊಂಡಾಡಿದ ಪ್ರಧಾನಿ ಮೋದಿ

ನವದೆಹಲಿ: ವಿಶ್ವ ಮಹಿಳಾ ದಿನಾಚರಣೆ ದಿನದ ಅಂಗವಾಗಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ನಾರಿಶಕ್ತಿಯನ್ನು ಸ್ಮರಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, ' ಅಂತರರಾಷ್ಟ್ರೀಯ ಮಹಿಳಾ ದಿನದಂದು ನಮ್ಮ ಅದಮ್ಯ ನಾರಿಶಕ್ತಿಗೆ ನಮನಗಳು. ನಮ್ಮ ರಾಷ್ಟ್ರದ ಮಹಿಳೆಯರ ಸಾಧನೆಗಳ ಬಗ್ಗೆ ಭಾರತ ಹೆಮ್ಮೆ ಪಡುತ್ತದೆ. ಎಲ್ಲ ರಂಗಗಳಲ್ಲೂ ಮಹಿಳೆಯರ ಸಬಲೀಕರಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಅವಕಾಶ ಪಡೆದಿರುವುದು ನಮ್ಮ ಸರ್ಕಾರದ ಗೌರವವಾಗಿದೆ,' ಎಂದು ಅವರು ಹೇಳಿದ್ದಾರೆ.
ಮಾರ್ಚ್ 8ರಂದು ಜಗತ್ತಿನಾದ್ಯಂತ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತದೆ.
Saluting our indomitable #NariShakti on International Women's Day! India takes pride in the many accomplishments of the women of our nation. It is our Government’s honour to be getting the opportunity to work towards furthering women empowerment across a wide range of sectors.
— Narendra Modi (@narendramodi) March 8, 2021
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.