ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಸಂಖ್ಯೆ ಹೆಚ್ಚಿರುವ 10 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಸಭೆ

Last Updated 23 ಏಪ್ರಿಲ್ 2021, 8:08 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಕೋವಿಡ್ ಸೋಂಕಿತರು ಮತ್ತು ಸಾವಿನ ಸಂಖ್ಯೆ ವಿಪರೀತ ಹೆಚ್ಚಿದ್ದು, ಕೋವಿಡ್ ಸಂಖ್ಯೆ ಹೆಚ್ಚಿರುವ ದೇಶದ 10 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಭೆ ನಡೆಸುತ್ತಿದ್ದಾರೆ.

ಕೊರೊನಾ ಸೋಂಕಿತರ ದೈನಂದಿನ ಪ್ರಕರಣಗಳ ಸಂಖ್ಯೆ 3 ಲಕ್ಷ ದಾಟಿದ್ದು, ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಪ್ರಚಾರ ಸಭೆಗಳನ್ನು ಮೊಟಕುಗೊಳಿಸಿರುವ ಪ್ರಧಾನಿ ಮೋದಿ, ಸಿಎಂಗಳ ಜೊತೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸುತ್ತಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಹಾರಾಷ್ಟ್ರ, ಉತ್ತರ ಪ್ರದೇಶ, ಕೇರಳ, ಛತ್ತೀಸ್‌ಗಡ, ಮಧ್ಯಪ್ರದೇಶ ಮತ್ತು ದೆಹಲಿಯ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ.

ಆಮ್ಲಜನಕದ ಕೊರತೆ ಹಿನ್ನೆಲೆಯಲ್ಲಿ ಕೆಲವು ರಾಜ್ಯಗಳ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರನ್ನು ಚಿಕಿತ್ಸೆಗೆ ದಾಖಲಿಸಿಕೊಳ್ಳಲು ನಿರಾಕರಿಸುತ್ತಿರುವುದರಿಂದ ದೇಶದ ಪ್ರಮುಖ ಆಮ್ಲಜನಕ ಸರಬರಾಜುದಾರರ ಜೊತೆಯೂ ಪ್ರಧಾನಿ, ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT