ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ಗೆ ಹೆದರುವ ಅಗತ್ಯವಿಲ್ಲ, ಮಾಸ್ಕ್‌ ಕಡ್ಡಾಯವಿಲ್ಲ : ಪ್ರಧಾನಿ ಮೋದಿ

Last Updated 22 ಡಿಸೆಂಬರ್ 2022, 15:49 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಕೋವಿಡ್‌–19 ಪರಿಸ್ಥಿತಿ ಅವಲೋಕಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಗುರುವಾರ ಉನ್ನತ ಮಟ್ಟದ ಸಭೆ ನಡೆಸಿದ್ದು, ಜನತೆ ಕೋವಿಡ್‌ ಕುರಿತು ಅನಗತ್ಯಭಯಪಡುವ ಅಗತ್ಯವಿಲ್ಲ ಎಂದಿದ್ದಾರೆ.

ಮಾಸ್ಕ್‌ ಧರಿಸುವಿಕೆ ಕಡ್ಡಾಯವಲ್ಲ. ಆದರೆ ಮಾಸ್ಕ್‌ ಧರಿಸಿ, ಕೋವಿಡ್‌ ಮುನ್ನೆಚ್ಚರಿಕೆ ಪಾಲಿಸಿ ಎಂದು ಸಭೆ ಬಳಿಕ ಪ್ರಧಾನಿ ಸಲಹೆ ನೀಡಿದ್ದಾರೆ. ಕೋವಿಡ್‌ ಪರೀಕ್ಷೆ ಹೆಚ್ಚಳ ಮತ್ತು ಬಲವರ್ಧಿತ ಕಣ್ಗಾವಲು ಅಗತ್ಯವನ್ನು ಸಭೆಯಲ್ಲಿ ಮೋದಿ ಒತ್ತಿ ಹೇಳಿದರು.


ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಾಂಡವೀಯ, ಗೃಹ ಸಚಿವ ಅಮಿತ್‌ ಶಾ, ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧ್ಯ ಮತ್ತು ಇತರ ಹಿರಿಯ ಅಧಿಕಾರಿಗಳು ವರ್ಚ್ಯುವಲ್‌ ಸಭೆಯಲ್ಲಿ ಭಾಗಿಯಾದರು. ಆರೋಗ್ಯ ಸಚಿವಾಲಯದ ಕಾರ್ಯದರ್ಶಿಗಳು ಸಭೆಯಲ್ಲಿ ಕೋವಿಡ್‌ ಸ್ಥಿತಿಗತಿ ಮತ್ತು ಸಿದ್ಧತೆ ಕುರಿತು ವಿಸ್ತೃತವಾಗಿ ವಿವರಿಸಿದ್ದಾರೆ ಎಂದು ಮೂಲಗಳು ಹೇಳಿವೆ.


ಚೀನಾದಲ್ಲಿ ಕೋವಿಡ್‌ ಏರಿಕೆಗೆ ಕಾರಣವಾಗಿರುವ ವೈರಸ್‌ ಭಾರತದ ನಾಲ್ವರಲ್ಲಿ ಪತ್ತೆಯಾದ ಬೆನ್ನಲ್ಲೇ ಕೋವಿಡ್‌ ಕುರಿತು ಕೇಂದ್ರ ಸರ್ಕಾರ ಜಾಗೃತಗೊಂಡಿದೆ. ಆದರೆ ಭಯಪಡುವ ಅಗತ್ಯವಿಲ್ಲ. ಸೋಂಕಿತ ನಾಲ್ವರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಹೇಳಿದೆ.


ಆಕ್ಸಿಜನ್ ಸಿಲಿಂಡರ್‌ಗಳು, ಪಿಎಸ್‌ಎ ಪ್ಲಾಂಟ್‌ಗಳು, ವೆಂಟಿಲೇಟರ್‌ಗಳು ಮತ್ತು ಮಾನವ ಸಂಪನ್ಮೂಲಗಳು ಸೇರಿದಂತೆ ಆಸ್ಪತ್ರೆಯ ಮೂಲಸೌಕರ್ಯಗಳೊಂದಿಗೆ ಆಸ್ಪತ್ರೆ ಕಾರ್ಯಾಚರಣೆಯ ಸಿದ್ಧತೆಯನ್ನು ರಾಜ್ಯಗಳು ಖಚಿತಪಡಿಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಸಭೆಯಲ್ಲಿ ಸಲಹೆ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT