ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹660 ಕೋಟಿ ವೆಚ್ಚದಲ್ಲಿ ಕಟ್ಟಿರುವ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟಿಸಿದ ಪ್ರಧಾನಿ

Last Updated 24 ಆಗಸ್ಟ್ 2022, 11:05 IST
ಅಕ್ಷರ ಗಾತ್ರ

ಮೊಹಾಲಿ: ಪಂಜಾಬ್‌ನ ಮೋಹಾಲಿ ಜಿಲ್ಲೆಯಲ್ಲಿ (ಚಂಡೀಗಡ ಬಳಿ) ಅತ್ಯಾಧುನಿಕ ಸೌಲಭ್ಯಗಳೊಂದಿಗೆ ನಿರ್ಮಾಣವಾಗಿರುವ ಮುಲ್ಲಾನಪುರ್ ಹೋಮಿ ಬಾಬಾ ಕ್ಯಾನ್ಸರ್ ಆಸ್ಪತ್ರೆ ಹಾಗೂ ಸಂಶೋಧನಾ ಸಂಸ್ಥೆಯನ್ನು ಬುಧವಾರ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.

300 ಬೆಡ್‌ಗಳ ಈ ವಿಶೇಷ ಕ್ಯಾನ್ಸರ್ ಆಸ್ಪತ್ರೆಯನ್ನು ಕೇಂದ್ರ ಅಣುಶಕ್ತಿ ಸಂಸ್ಥೆ, ಟಾಟಾ ಮೆಮೋರಿಯಲ್ ಸೆಂಟರ್ ಸಹಯೋಗದಲ್ಲಿ ನಿರ್ಮಾಣ ಮಾಡಲಾಗಿದೆ. ಈ ಆಸ್ಪತ್ರೆಯನ್ನು ಬರೋಬ್ಬರಿ ₹ 660 ಕೋಟಿ ವೆಚ್ಚದಲ್ಲಿ ಕಟ್ಟಲಾಗಿದೆ.

ಮುಲ್ಲಾನಪುರ್ ಹೋಮಿ ಬಾಬಾ ಕ್ಯಾನ್ಸರ್ ಆಸ್ಪತ್ರೆ ಹಾಗೂ ಸಂಶೋಧನಾ ಸಂಸ್ಥೆಯಲ್ಲಿ ಮಮ್ಮೊಗ್ರಫಿ, ಅತ್ಯಾಧುನಿಕ ಎಂಆರ್‌ಐ, ಡಿಜಿಟಲ್ ರೆಡಿಯೋಗ್ರಫಿ, ಡಿಜಿಟಲ್ ಬ್ರಾಚಿಥೆರಫಿ ಮೂಲಕ ಎಲ್ಲ ತರದ ಕ್ಯಾನ್ಸರ್‌ಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ಈ ಆಸ್ಪತ್ರೆ ಕೇವಲ ಪಂಜಾಬ್ ಅಲ್ಲದೇ, ಜಮ್ಮು ಮತ್ತು ಕಾಶ್ಮೀರ, ಹರಿಯಾಣ, ರಾಜಸ್ಥಾನ, ಹಿಮಾಚಲ ಪ್ರದೇಶ, ಉತ್ತರಾಖಂಡದ ರಾಜ್ಯಗಳ ಕ್ಯಾನ್ಸರ್ ರೋಗಿಗಳಿಗೆ ಅನುಕೂಲ ಆಗಲಿದೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಂಜಾಬ್ ಸಿಎಂ ಭಗವಂತ್ ಮಾನ್ ಕೂಡ ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಹರಿಯಾಣದ ಫರಿದಾಬಾದ್‌ನಲ್ಲಿ 2,600 ಹಾಸಿಗೆಗಳ ಅಮೃತ ಆಸ್ಪತ್ರೆ ಬುಧವಾರ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ಆರೋಗ್ಯ ಮತ್ತು ಆಧ್ಯಾತ್ಮ ಒಂದಕ್ಕೊಂದು ನಿಕಟ ಸಂಬಂಧ ಹೊಂದಿದೆ ಎಂದು ಹೇಳಿದ್ದಾರೆ.

ಕೋವಿಡ್-19 ಲಸಿಕೆ ಅಭಿಯಾನದ ಯಶಸ್ವಿಗೆ ಆಧ್ಯಾತ್ಮಿಕ ಹಾಗೂ ಖಾಸಗಿ ಪಾಲುದಾರಿಕೆ ಉತ್ತಮ ಉದಾಹರಣೆಯಾಗಿದೆ ಎಂದು ಅವರು ಹೇಳಿದ್ದಾರೆ.ಮಾತಾ ಅಮೃತಾನಂದಮಯಿ ಮಠದ ಆಶ್ರಯದಲ್ಲಿ 130 ಎಕರೆ ಪ್ರದೇಶದಲ್ಲಿ ವಿಶಾಲವಾಗಿ ಹರಡಿರುವ ಕ್ಯಾಂಪಸ್‌ ಆಸ್ಪತ್ರೆ ಅನ್ನು ಆರು ವರ್ಷಗಳ ಅವಧಿಯಲ್ಲಿ ನಿರ್ಮಿಸಲಾಗಿದೆ. ಇದರಲ್ಲಿ ಏಳು ಅಂತಸ್ತಿನ ರಿಸರ್ಚ್ ಬ್ಲಾಕ್ ಹೊಂದಿದೆ.

ಕಾರ್ಯಕ್ರಮದಲ್ಲಿ ಮಾತಾ ಅಮೃತಾನಂದಮಯಿ, ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಮತ್ತು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT