ನವದೆಹಲಿ: ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕಗಳನ್ನು ಗೆದ್ದ ಮನೀಷ್ ನರ್ವಾಲ್ ಮತ್ತು ಸಿಂಗ್‌ರಾಜ್ ಆಧಾನ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅಭಿನಂದಿಸಿದರು.
ಜಪಾನ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡೆಯಲ್ಲಿ ಶೂಟರ್ ಮನೀಷ್ ನರ್ವಾಲ್ ಅವರು ದಾಖಲೆ ಮುರಿಯುವ ಮೂಲಕ ಭಾರತಕ್ಕೆ ಮೂರನೇ ಚಿನ್ನದ ಪದಕವನ್ನು ಗೆದ್ದರೆ, ಸಿಂಗ್‌ರಾಜ್ ಆಧಾನ ಅವರು ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ‘ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ವೈಭವ ಮುಂದುವರಿದಿದೆ. ಭಾರತಕ್ಕೆ ಚಿನ್ನ ಗೆಲ್ಲುವ ಮೂಲಕ ಯುವ ಮತ್ತು ಅದ್ಭುತ ಪ್ರತಿಭೆಯ ಮನೀಷ್ ನರ್ವಾಲ್ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಭಾರತೀಯ ಕ್ರೀಡೆಗೆ ಇದು ವಿಶೇಷ ಕ್ಷಣವಾಗಿದೆ. ನಿಮಗೆ ಅಭಿನಂದನೆಗಳು’ ಎಂದಿದ್ದಾರೆ.
‘ಸಿಂಗ್‌ರಾಜ್ ಆಧಾನ ಅವರು ಮತ್ತೊಮ್ಮೆ ಸಾಧನೆ ಮಾಡಿದ್ದಾರೆ. ಅವರು ಮತ್ತೊಂದು ಪದಕ ಗೆದ್ದಿದ್ದಾರೆ. ಈ ಬಾರಿ ಮಿಶ್ರ 50 ಮೀಟರ್ ಎಸ್‌ಎಚ್1ನಲ್ಲಿ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಅವರ ಈ ಸಾಧನೆಯನ್ನು ಭಾರತ ಸಂಭ್ರಮಿಸುತ್ತಿದೆ. ನಿಮಗೆ ಅಭಿನಂದೆಗಳು’ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.