ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲೀಗಡ: ರಾಜ ಮಹೇಂದ್ರ ಪ್ರತಾಪ್‌ ಸಿಂಗ್‌ ವಿಶ್ವವಿದ್ಯಾಲಯಕ್ಕೆ ಮೋದಿ ಶಂಕುಸ್ಥಾಪನೆ

Last Updated 14 ಸೆಪ್ಟೆಂಬರ್ 2021, 8:49 IST
ಅಕ್ಷರ ಗಾತ್ರ

ಲಖನೌ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜಾ ಮಹೇಂದ್ರ ಪ್ರತಾಪ ಸಿಂಗ್ ವಿಶ್ವವಿದ್ಯಾಲಯಕ್ಕೆ ಮಂಗಳವಾರ ಶಂಕು ಸ್ಥಾಪನೆ ನೆರವೇರಿಸಿದ್ದಾರೆ.

ಇದೇ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪ ಮುಖ್ಯಮಂತ್ರಿ ದಿನೇಶ್‌ ಶರ್ಮಾ ಅವರು ವಿಶ್ವವಿದ್ಯಾಲಯದ ರೂಪುರೇಷಗಳ ಬಗ್ಗೆ ಪ್ರಧಾನಿ ಮೋದಿಯವರಿಗೆ ಮಾಹಿತಿ ನೀಡಿದರು.

ಸ್ವಾತಂತ್ರ್ಯ ಹೋರಾಟಗಾರ, ಶಿಕ್ಷಣ ತಜ್ಞ, ಸಮಾಜ ಸುಧಾರಕರಾದ ರಾಜ ಮಹೇಂದ್ರ ಪ್ರತಾಪ್‌ ಸಿಂಗ್‌ ಅವರ ಸ್ಮರಣೆ ಮತ್ತು ಗೌರವಾರ್ಥವಾಗಿ ಉತ್ತರ ಪ್ರದೇಶ ಸರ್ಕಾರವು ವಿಶ್ವವಿದ್ಯಾಲಯವನ್ನು ಸ್ಥಾಪಿಸುತ್ತಿದೆ.

ಅಲೀಗಡದ ಲೋಧಾ ಗ್ರಾಮದಲ್ಲಿ ಒಟ್ಟು 92 ಎಕರೆ ಪ್ರದೇಶದಲ್ಲಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ತೀರ್ಮಾನಿಸಿದೆ. ಇದರಿಂದಾಗಿ ಅಲೀಗಡದ ಒಟ್ಟು 395 ಕಾಲೇಜುಗಳು ಈ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡಲಿವೆ.

ವಿಶ್ವವಿದ್ಯಾಲಯಕ್ಕೆ ಶಂಕು ಸ್ಥಾಪನೆ ನೆರವೇರಿಸಿದ ಬಳಿಕ ಪ್ರಧಾನಿ ಮೋದಿ ಅವರು, ಉತ್ತರ ಪ್ರದೇಶದ ರಕ್ಷಣಾ ಕೈಗಾರಿಕಾ ಕಾರಿಡಾರ್‌ಗೆ ಭೇಟಿ ನೀಡಿದ್ದರು. ಉತ್ತರ ಪ್ರದೇಶದ ಗವರ್ನರ್ ಆನಂದಿ ಬೆನ್‌ ಪಟೇಲ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT