ಶಿಕ್ಷಕರಿಗೆ ಪ್ರಧಾನಿ ಶುಭಾಶಯ

ನವದೆಹಲಿ: ‘ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಯುವ ಮನಸ್ಸುಗಳನ್ನು ಸಜ್ಜುಗೊಳಿಸುತ್ತಿರುವ ಶಿಕ್ಷಕರ ಸೇವೆಗಾಗಿ ರಾಷ್ಟ್ರ ಎಂದಿಗೂ ಕೃತಜ್ಞರಾಗಿರುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಶಿಕ್ಷಕರ ದಿನದ ಸಂದೇಶದಲ್ಲಿ ತಿಳಿಸಿದ್ದಾರೆ.
‘ನಮ್ಮ ಅರಿವಿನ ಮಟ್ಟವನ್ನು, ದೇಶದ ಇತಿಹಾಸದ ಜ್ಞಾನವನ್ನು ಶಿಕ್ಷಕರು ಹೆಚ್ಚಿಸುತ್ತಾರೆ. ಇತ್ತೀಚಿನ ಮನ್ ಕೀ ಬಾತ್ ಭಾಷಣದಲ್ಲಿಯೂ ಇತಿಹಾಸದ ಅರಿವು ಮೂಡಿಸಬೇಕು ಎಂದು ಶಿಕ್ಷಕರಿಗೆ ಕರೆ ನೀಡಿದ್ದೆ. ನಮ್ಮ ಶಿಕ್ಷಕರು ನಮ್ಮ ಹೀರೋಗಳು’ ಎಂದು ಅವರು ಟ್ವೀಟ್ ಮಾಡಿದ್ದಾರೆ.
We remain grateful to the hardworking teachers for their contributions towards shaping minds and building our nation. On Teachers Day, we express gratitude to our teachers for their remarkable efforts. We pay tributes to Dr. S. Radhakrishnan on his Jayanti. #OurTeachersOurHeroes
— Narendra Modi (@narendramodi) September 5, 2020
ಇದೇ ಸಂದರ್ಭದಲ್ಲಿ ಅವರು ಮಾಜಿ ರಾಷ್ಟ್ರಪತಿ ಡಾ.ಎಸ್.ರಾಧಾಕೃಷ್ಣನ್ ಅವರ ಸೇವೆಯನ್ನು ಸ್ಮರಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.