ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆಗೆ ಸಿದ್ಧತೆ: ಗುಜರಾತ್‌ನಲ್ಲಿ ಹಲವು ಯೋಜನೆಗಳಿಗೆ ಮೋದಿ ಚಾಲನೆ

Last Updated 9 ಅಕ್ಟೋಬರ್ 2022, 11:42 IST
ಅಕ್ಷರ ಗಾತ್ರ

ಅಹಮದಾಬಾದ್‌: ವರ್ಷಾಂತ್ಯಕ್ಕೆ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಭಾನುವಾರದಿಂದ ಗುಜರಾತ್‌ಗೆ ಮೂರು ದಿನಗಳ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ₹14,600 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

ಮೆಹ್ಸಾನಾ ಜಿಲ್ಲೆಯ ಮೊಧೇರಾ ಗ್ರಾಮದಲ್ಲಿ ಸಂಜೆ ಸುಮಾರು ₹3,900 ಕೋಟಿ ಮೊತ್ತದ ಬಹುವಿಧದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.ಮೊಧೇರಾವನ್ನು ಭಾರತದ ಮೊದಲ 24*7 ಸೌರಶಕ್ತಿ ಚಾಲಿತ ಗ್ರಾಮವೆಂದು ಘೋಷಿಸಿದರು. ಬಳಿಕ ಮೋಧೇಶ್ವರಿ ಮಾತಾ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ, ಮೊಧೇರಾದ ಸೂರ್ಯ ಮಂದಿರಕ್ಕೆ ಭೇಟಿ ನೀಡಿದರು.

ಸೋಮವಾರ ಭರೂಚ್ ಜಿಲ್ಲೆಯ ಅಮೋದ್‌ನಲ್ಲಿ ₹8,000 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ. ಮಂಗಳವಾರ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡುವರು. ಬಳಿಕ ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT