ಇಂದಿರಾ ಗಾಂಧಿಗೆ ಶ್ರದ್ಧಾಂಜಲಿ ಅರ್ಪಿಸಿದ ಪ್ರಧಾನಿ ಮೋದಿ

ನವದೆಹಲಿ: ಇಂದಿರಾ ಗಾಂಧಿ ಅವರ ಪುಣ್ಯತಿಥಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
'ಭಾರತದ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧೀಜಿ ಅವರಿಗೆ ಅವರ ಪುಣ್ಯತಿಥಿಯಂದು ಶ್ರದ್ಧಾಂಜಲಿ ಸಲ್ಲಿಸುತ್ತೇನೆ' ಎಂದು ಒಂದು ಸಾಲಿನ ಟ್ವೀಟ್ ಮಾಡಿದ್ದಾರೆ.
1984 ರಲ್ಲಿ ಅಂದಿನ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ಅವರನ್ನು ಖಲಿಸ್ತಾನಿ ಉಗ್ರರೊಂದಿಗೆ ನಂಟು ಹೊಂದಿದ್ದ ಅವರ ಇಬ್ಬರು ಭದ್ರತಾ ಸಿಬ್ಬಂದಿ ಹತ್ಯೆ ಮಾಡಿದ್ದರು.
On her death anniversary, paying tributes to India’s former Prime Minister, Smt. Indira Gandhi Ji.
— Narendra Modi (@narendramodi) October 31, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.