ನವದೆಹಲಿ: ಕೋವಿಡ್ ನಿಯಂತ್ರಣದ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಕರೆದಿದ್ದ ಸಭೆಯಲ್ಲಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮಾತನಾಡಿದ ವಿಡಿಯೊ ಟೆಲಿವಿಜನ್ಗಳಲ್ಲಿ ಪ್ರಸಾರವಾಗಿರುವುದಕ್ಕೆ ಪ್ರಧಾನಿ ಮೋದಿ, ಕೇಜ್ರಿವಾಲ್ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆಶುಕ್ರವಾರ ನಡೆದಿದೆ.

ಬಾಗಿಲು ಮುಚ್ಚಿದ ಕೊಠಡಿಯಲ್ಲಿ ಸಿಎಂ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿಯವರ ವಿಡಿಯೊ ಕಾನ್ಫರೆನ್ಸ್ನಲ್ಲಿ ಭಾಗವಹಿಸಬೇಕಿತ್ತು. ಆದರೆ, ಅವರ ಮಾತುಕತೆ ಮುಗಿದ ಕೂಡಲೇ ಟಿವಿಗಳಲ್ಲಿ ವಿಡಿಯೊ ಪ್ರಸಾರವಾಯಿತು. ಈ ಘಟನೆ ನಮ್ಮ ಶಿಷ್ಟಾಚಾರಕ್ಕೆವಿರುದ್ಧವಾಗಿದೆ ಎಂದು ಮೋದಿ ಸಭೆಯಲ್ಲೇತರಾಟೆಗೆ ತೆಗೆದುಕೊಂಡಿದ್ದಾರೆ.

ಕೂಡಲೇ ಈ ಎಡವಟ್ಟಿನಿಂದ ಎಚ್ಚೆತ್ತ ಕೇಜ್ರಿವಾಲ್ ಅವರು ಪ್ರಧಾನಿ ಅವರ ಕ್ಷಮೆ ಕೋರಿದರು. ಬಳಿಕ ದೆಹಲಿ ಮುಖ್ಯಮಂತ್ರಿ ಕಚೇರಿ ಕೂಡ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿ ಟ್ವೀಟ್ ಮಾಡಿತು.

ರಾಜಧಾನಿ ದೆಹಲಿಯ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಂದ ಕೋವಿಡ್ ರೋಗಿಗಳ ಸಂಕಷ್ಟದ ಬಗ್ಗೆ ಪ್ರಧಾನಿ ಗಮನ ಸೆಳೆದ ಕೇಜ್ರಿವಾಲ್, ದೆಹಲಿಯಲ್ಲಿ ಆಕ್ಸಿಜನ್ ಪ್ಲಾಂಟ್ ಇಲ್ಲವೆಂಬ ಕಾರಣಕ್ಕೆ ದೆಹಲಿಯ 2 ಕೋಟಿ ಜನ ಆಮ್ಲಜನಕ ಪಡೆಯಬಾರದೇ? ರಾಷ್ಟ್ರದ 130 ಕೋಟಿ ಜನರಿಗೆ ರಾಷ್ಟ್ರದ ಸಂಪನ್ಮೂಲಗಳ ಮೇಲೆ ಸಮಾನವಾದ ಹಕ್ಕು ಇಲ್ಲವೇ ಎಂದು ಪ್ರಶ್ನಿಸಿದ್ದರು. ಇದು ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.