ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆಹರೂ ಸ್ಮರಣೆ: ಮಕ್ಕಳ ದಿನಾಚರಣೆಗೆ ಶುಭಾಶಯ ಕೋರಿದ ಗಣ್ಯರು

Last Updated 14 ನವೆಂಬರ್ 2020, 7:01 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಮೊದಲ ಪ್ರಧಾನಿ ಜವಾಹರ ಲಾಲ್ ನೆಹರೂ ಅವರ ಸ್ಮರಣೆಯ ಜೊತೆಗೆ ಮಕ್ಕಳ ದಿನಾಚರಣೆಗೆ ದೇಶದ ಮತ್ತು ನಾಡಿನ ಗಣ್ಯರು ಶುಭಾಶಯ ಕೋರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ನೆಹರೂ ಅವರನ್ನು ಸ್ಮರಿಸಿ ಮಕ್ಕಳ ದಿನಾಚರಣೆಗೆ ಶುಭಾಶಯ ಕೋರಿ ಟ್ವೀಟ್‌ ಮಾಡಿದ್ದಾರೆ.

ಆಧುನಿಕ ಭಾರತಕ್ಕೆ ನೆಹರೂ ಅವರು ನೀಡಿದ ಅಪಾರವಾದ ಕೊಡುಗೆ ನೀಡಿದ್ದಾರೆ. ಮಕ್ಕಳ ದಿನಾಚರಣೆಯ ದಿನದಂದು ಅವರನ್ನು ಸ್ಮರಿಸೋಣ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಟ್ವೀಟ್‌ ಮಾಡಿದ್ದಾರೆ.

ಇಂದು ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಜನ್ಮ ದಿನವನ್ನು ಆಚರಿಸಲಾಗುತ್ತಿದೆ. ಸಹೋದರತೆ, ಸಮಾನತೆಯ ಮೌಲ್ಯಗಳನ್ನು ಕಟ್ಟಿಕೊಟ್ಟಿದ್ದಾರೆ. ಈ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಪ್ರಯತ್ನ ನಮ್ಮದಾಗಬೇಕು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ರಾಷ್ಟ್ರದ ಮೊದಲ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಜನ್ಮದಿನದಂದು ಅವರಿಗೆ ಗೌರವಪೂರ್ಣ ನಮನಗಳು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮತ್ತು ದೇಶದ ಪ್ರಥಮ ಪ್ರಧಾನಿಯಾಗಿ ಅವರು ನೀಡಿದ ಕೊಡುಗೆಗಳು ಅವಿಸ್ಮರಣೀಯ. ಎಲ್ಲ ಮಕ್ಕಳಿಗೂ ಮಕ್ಕಳ ದಿನಾಚರಣೆಯ ಶುಭಾಶಯಗಳು ಎಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಟ್ವೀಟ್‌ ಮಾಡಿದ್ದಾರೆ.

ಆಧುನಿಕ ಭಾರತದ ದೃಷ್ಠಾರ, ಜಾತ್ಯತೀತ ಮೌಲ್ಯದ ಪ್ರಬಲ ಪ್ರತಿಪಾದಕ, ಕಾಂಗ್ರೆಸ್ ಪಕ್ಷದ ಹೆಮ್ಮೆಯ ನಾಯಕ ಮತ್ತು ಮಕ್ಕಳಲ್ಲಿ ದೇವರನ್ನು ಕಂಡ ಮಾನವತಾವಾದಿ,‌ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರನ್ನು ಹುಟ್ಟುಹಬ್ಬದಂದು ಅಭಿಮಾನದಿಂದ‌ ಸ್ಮರಿಸುತ್ತಾ, ಗೌರವ ನಮನ‌ ಸಲ್ಲಿಸುವೆ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT