ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯೂಯಾರ್ಕ್‌ಗೆ ಪ್ರಧಾನಿ ಮೋದಿ: ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಉದ್ದೇಶಿಸಿ ಭಾಷಣ

Last Updated 25 ಸೆಪ್ಟೆಂಬರ್ 2021, 3:11 IST
ಅಕ್ಷರ ಗಾತ್ರ

ನ್ಯೂಯಾರ್ಕ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ನ್ಯೂಯಾರ್ಕ್‌ಗೆ ಆಗಮಿಸಿದ್ದು, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 76ನೇ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಶ್ವೇತಭವನದ ಓವಲ್ ಕಚೇರಿಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ಮೊದಲ ದ್ವಿಪಕ್ಷೀಯ ಸಭೆ ಮತ್ತು ಮೊದಲ ಕ್ವಾಡ್ ಶೃಂಗಸಭೆಯಲ್ಲಿ ಭಾಗವಹಿಸಿದ ಬಳಿಕ ಮೋದಿ ವಾಷಿಂಗ್ಟನ್‌ನಿಂದ ನ್ಯೂಯಾರ್ಕ್‌ಗೆ ತೆರಳಿದರು .

‘ನ್ಯೂಯಾರ್ಕ್ ನಗರದಲ್ಲಿ ಬಂದಿಳಿದೆ. 25ರಂದು ಸಂಜೆ 6:30 ಕ್ಕೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದೇನೆ’ ಎಂದು ಪ್ರಧಾನಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

‘ಭಾರತದ 130 ಕೋಟಿ ಜನರ ಭಾವನೆಗಳಿಗೆ ಧ್ವನಿಯಾಗಿರುವ ಪ್ರಧಾನಿ ನರೇಂದ್ರ ಮೋದಿಯವರು ನಾಳೆ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ 76ನೇ ಅಧಿವೇಶನ ಉದ್ದೇಶಿಸಿ ಮಾತನಾಡಲು ನ್ಯೂಯಾರ್ಕ್‌ಗೆ ಆಗಮಿಸಿದ್ದಾರೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಟ್ವೀಟ್ ಮಾಡಿದೆ.


ನ್ಯೂಯಾರ್ಕ್ ವಿಮಾನ ನಿಲ್ದಾಣದಲ್ಲಿ ಅಮೆರಿಕದ ಭಾರತದ ರಾಯಭಾರಿ ತರಂಜಿತ್ ಸಿಂಗ್ ಸಂಧು ಮತ್ತು ವಿಶ್ವಸಂಸ್ಥೆಯ ಭಾರತೀಯ ರಾಯಭಾರಿ ಟಿ ಎಸ್ ತಿರುಮೂರ್ತಿ ಅವರು ಪ್ರಧಾನಿ ಮೋದಿಯವರನ್ನು ಸ್ವಾಗತಿಸಿದರು.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 76ನೇ ಅಧಿವೇಶನದ ಸಾಮಾನ್ಯ ಚರ್ಚೆಯಲ್ಲಿ ಮೋದಿ ಶನಿವಾರ ಮಾತನಾಡಲಿದ್ದಾರೆ. ಕೋವಿಡ್ -19ನಿಂದ ಚೇತರಿಸಿಕೊಳ್ಳುವ ಭರವಸೆಯನ್ನು ಮೂಡಿಸುವುದು, ಸಮರ್ಥವಾಗಿ ಪುನರ್ ನಿರ್ಮಾಣ ಮಾಡುವುದು, ಭೂಮಿಯ ಅಗತ್ಯಗಳಿಗೆ ಸ್ಪಂದಿಸುವುದು, ಜನರ ಹಕ್ಕುಗಳನ್ನು ಗೌರವಿಸುವುದು ಮತ್ತು ವಿಶ್ವಸಂಸ್ಥೆಯ ಪ್ರಾಮುಖ್ಯತೆ ಹೆಚ್ಚಿಸುವುದುಈ ವರ್ಷದ ಸಾಮಾನ್ಯ ಸಭೆಯ ಚರ್ಚೆಯ ವಿಷಯವಾಗಿದೆ.

ಸುಮಾರು 109 ರಾಷ್ಟ್ರಗಳು ಮತ್ತು ಸರ್ಕಾರದ ಮುಖ್ಯಸ್ಥರು ಸಾಮಾನ್ಯ ಸಭೆಯ ಚರ್ಚೆಯಲ್ಲಿ ಮಾತನಾಡಲಿದ್ದಾರೆ. ಸುಮಾರು 60 ಜನರು ಮೊದಲೇ ರೆಕಾರ್ಡ್ ಮಾಡಿದ ವಿಡಿಯೊ ಹೇಳಿಕೆಗಳ ಮೂಲಕ ಭಾಷಣ ಮಾಡುತ್ತಾರೆ.

2019ರಲ್ಲಿ ಕೊನೆಯ ಬಾರಿಗೆ ಮೋದಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು. ಕಳೆದ ವರ್ಷ, ಸೆಪ್ಟೆಂಬರ್‌ನಲ್ಲಿ ಕೊರೊನಾ ಕಾರಣದಿಂದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನಕ್ಕಾಗಿ ಮೊದಲೇ-ರೆಕಾರ್ಡ್ ಮಾಡಲಾದ ವಿಡಿಯೊ ಹೇಳಿಕೆಗಳನ್ನು ವಿಶ್ವ ನಾಯಕರು ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT