ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆದ್ದಾರಿ, ವಂದೇ ಭಾರತ್‌ ರೈಲಿನ ದೃಶ್ಯ: ಬೊಮ್ಮಾಯಿ ಟ್ವೀಟ್​ಗೆ ಮೋದಿ ಪ್ರತಿಕ್ರಿಯೆ

Last Updated 11 ಫೆಬ್ರುವರಿ 2023, 14:24 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಮೈಸೂರು-ಬೆಂಗಳೂರು ದಶಪಥ ರಸ್ತೆ ಹಾಗೂ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ವಿಡಿಯೊ ಹಂಚಿಕೊಂಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಮೈಸೂರು-ಬೆಂಗಳೂರು ದಶಪಥ ರಸ್ತೆ ಹಾಗೂ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ವಿಡಿಯೊವನ್ನು ಟ್ವೀಟ್‌ ಮಾಡಿದ್ದರು.

‘ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಹಾಗೂ ಬೆಂಗಳೂರು-ಮೈಸೂರು ದಶಪಥ ಎಕ್ಸ್‌ಪ್ರೆಸ್‌ ಹೆದ್ದಾರಿಯು ವಿಶ್ವದರ್ಜೆಯ ಮೂಲಸೌಕರ್ಯ ಮತ್ತು ಕರ್ನಾಟಕದ ಅಭೂತಪೂರ್ವ ಬೆಳವಣಿಗೆಯನ್ನು ಬಿಂಬಿಸುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ, ನಮ್ಮ ಡಬಲ್ ಎಂಜಿನ್ ಸರ್ಕಾರ ರಾಜ್ಯದಲ್ಲಿ ಅದ್ಭುತ ಕೆಲಸಗಳನ್ನು ಮಾಡುತ್ತಿದೆ ಎಂದು ಟ್ವೀಟ್ ಮಾಡಿದ್ದರು.

ಬೊಮ್ಮಾಯಿ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿರುವ ನರೇಂದ್ರ ಮೋದಿ ಅವರು “ನಮ್ಮ ಜನರಿಗೆ ಉತ್ತಮ ಮೂಲಭೂತ ಸೌಕರ್ಯದ ಅವಶ್ಯಕತೆಯಿದೆ, ಅದನ್ನು ಒದಗಿಸಲು ನಮ್ಮ ಸರ್ಕಾರ ಶ್ರಮಿಸುತ್ತಿದೆ. ನಮ್ಮ ಉತ್ತಮ ಯೋಜನೆಗಳು ಜಾಗತಿಕವಾಗಿ ಶ್ಲಾಘಿಸಲ್ಪಟ್ಟಿವೆ ಎಂದು ರೀಟ್ವೀಟ್‌ ಮಾಡಿದ್ದಾರೆ.

ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ 118 ಕಿಲೋಮೀಟರ್ ಇದೆ. ಈ ಯೋಜನೆಗಾಗಿ ಕೇಂದ್ರ ಸರ್ಕಾರ ಈಗಾಗಲೇ ₹ 11,000 ಬಿಡುಗಡೆ ಮಾಡಿದೆ. ದಶಪಥ ಹೆದ್ದಾರಿಯ ಕೆಳ ಭಾಗದಲ್ಲಿ ರೈಲ್ವೆ ಪಥವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT