ಶನಿವಾರ, ಅಕ್ಟೋಬರ್ 24, 2020
27 °C

₹75 ಮುಖಬೆಲೆಯ ನಾಣ್ಯ ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯ (ಎಫ್‌ಎಒ) 75ನೇ ವರ್ಷಾಚರಣೆಯ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ₹75 ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದರು.

ವಿಡಿಯೊ ಸಮಾವೇಶದಲ್ಲಿ ಪ್ರಧಾನಿ ಈ ನಾಣ್ಯಗಳನ್ನು ಅನಾವರಣಗೊಳಿಸಿದರು. ಇದೇ ಸಮಾರಂಭದಲ್ಲಿ ಅವರು 17 ಹೊಸ ಜೈವಿಕಸಂವರ್ಧಿತ ಬೆಳೆ ಪ್ರಭೇದಗಳನ್ನು ಬಿಡುಗಡೆ ಮಾಡಿದರು. ಕೃಷಿ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಖರೀದಿಸುವ ನಿಟ್ಟಿನಲ್ಲಿ ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.

ಕೇಂದ್ರದ ಮೂರು ಕೃಷಿ ಮಸೂದೆಗಳ ವಿರುದ್ಧ ದೇಶದಲ್ಲಿ ಪ್ರತಿಭಟನೆಗಳು ನಡೆಯುತ್ತಿರುವ ಹೊತ್ತಿನಲ್ಲೇ ಮೋದಿ ಕನಿಷ್ಠ ಬೆಂಬಲ ಬೆಲೆಯ ಕುರಿತು ಸರ್ಕಾರದ ನಿಲುವು ಸ್ಪಷ್ಟಪಡಿಸುವ ಪ್ರಯತ್ನವನ್ನು ಈ ಕಾರ್ಯಕ್ರಮದ ಮೂಲಕ ಮಾಡಿದ್ದಾರೆ.

ದೇಶದಲ್ಲಿ ಅಪೌಷ್ಟಿಕತೆ ನಿವಾರಿಸಲು ರಾಗಿ ಮತ್ತು ಹೆಚ್ಚಿನ ಪೌಷ್ಠಿಕಾಂಶದ ಬೆಳೆಗಳನ್ನು ಕೇಂದ್ರವು ಉತ್ತೇಜಿಸುತ್ತಿದೆ ಎಂದು ಅವರು ಇದೇ ವೇಳೆ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು