ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಸೋಂಕು ಪ್ರಕರಣ ಏರಿಕೆ; ಪ್ರಧಾನಿ ಮೋದಿಯಿಂದ ಪರಿಸ್ಥಿತಿ ಅವಲೋಕನ

Last Updated 4 ಏಪ್ರಿಲ್ 2021, 15:15 IST
ಅಕ್ಷರ ಗಾತ್ರ

ನವದೆಹಲಿ:ದೇಶದಾದ್ಯಂತ ಕೋವಿಡ್-19 ಸೋಂಕು ಪ್ರಕರಣಗಳು ತೀವ್ರವಾಗಿ ಏರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉನ್ನತ ಮಟ್ಟದ ಸಭೆ ನಡೆಸಿದ್ದು, ಸೋಂಕು ಹರಡುವುದನ್ನು ತಡೆಗಟ್ಟಲು ಸಲಹೆಗಳನ್ನು ಮುಂದಿಟ್ಟಿದ್ದಾರೆ.

ಸೋಂಕು ಮತ್ತು ಸಾವು ಪ್ರಕರಣಗಳಲ್ಲಿನ 'ಅಪಾಯಕಾರಿ ಬೆಳವಣಿಗೆ ದರ'ದ ಮಧ್ಯೆ ದೇಶದಲ್ಲಿ ಕೋವಿಡ್-19 ಪರಿಸ್ಥಿತಿ ಮತ್ತು ಲಸಿಕಾ ಅಭಿಯಾನವನ್ನು ಪ್ರಧಾನಿ ನರೇಂದ್ರ ಮೋದಿ ಪರಿಶೀಲಿಸಿದರು.ದೇಶದಲ್ಲಿ 10 ರಾಜ್ಯಗಳಲ್ಲಿ ಶೇಕಡಾ 91ಕ್ಕಿಂತ ಹೆಚ್ಚಿನ ಕೋವಿಡ್ ಪ್ರಕರಣಗಳು ದಾಖಲಾಗಿವೆ.

ಅತ್ಯಂತ ಗಂಭೀರ ಮತ್ತು ಬದ್ಧತೆಯಿಂದ ಕಾರ್ಯಗತಗೊಳಿಸಿದರೆ ಪರೀಕ್ಷೆ, ಪತ್ತೆಹಚ್ಚುವಿಕೆ, ಚಿಕಿತ್ಸೆ, ನಿಯಮಾವಳಿಗಳ ಪಾಲನೆ ಮತ್ತು ವ್ಯಾಕ್ಸಿನೇಷನ್ ಮಾಡುವ ಐದು ತಂತ್ರಗಳು ಸಾಂಕ್ರಾಮಿಕ ರೋಗವು ಹರಡುವುದನ್ನು ತಡೆಯಲು ಪರಿಣಾಮಕಾರಿಯಾಗಿದೆ ಎಂದು ಮೋದಿ ಹೇಳಿರುವುದಾಗಿ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸದಿರುವುದು ಮುಖ್ಯವಾಗಿ ಮುಖಗವುಸುಗಳ ಬಳಕೆ ಮತ್ತು ಸಾಮಾಜಿಕ ದೂರ ಕಾಯ್ದುಕೊಳ್ಳದಿರುವುದು ಸೋಂಕು ಪ್ರಕರಣಗಳ ತೀವ್ರ ಏರಿಕೆಗೆ ಕಾರಣವಾಗಬಹುದು. ಅಲ್ಲದೆ ಕ್ಷೇತ್ರ ಮಟ್ಟದಲ್ಲಿ ಸೋಂಕು ನಿಯಂತ್ರಕ ಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಕೊರತೆಯು ಕಾರಣವಾಗಬಹುದು ಎಂದು ಅದು ಹೇಳಿದೆ.

ಒಟ್ಟಾರೆ 10 ರಾಜ್ಯಗಳಿಂದಲೇ ಶೇ 91 ಕ್ಕಿಂತ ಹೆಚ್ಚಿನ ಪ್ರಕರಣಗಳು ಮತ್ತು ಸಾವುಗಳು ವರದಿಯಾಗಿವೆ. ಲಸಿಕೆ ತಯಾರಕರು ತಮ್ಮ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುತ್ತಿದ್ದಾರೆ ಮತ್ತು ಇತರ ದೇಶೀಯ ಮತ್ತು ಸಾಗರೋತ್ತರ ಕಂಪನಿಗಳೊಂದಿಗೆ ಚರ್ಚೆಯನ್ನು ನಡೆಸುತ್ತಿದ್ದಾರೆ ಎಂಬುದನ್ನು ಸಭೆಯಲ್ಲಿ ಪ್ರಸ್ತುತಿಪಡಿಸಲಾಯಿತು.

ಮಹಾರಾಷ್ಟ್ರ, ಪಂಜಾಬ್ ಮತ್ತು ಛತ್ತೀಸಗಡದ ಪರಿಸ್ಥಿತಿ ಗಂಭೀರವಾಗಿದೆ ಎಂದು ಗಮನಿಸಿದ ಸಭೆಯಲ್ಲಿನ ಪ್ರಸ್ತುತಿಯು, ಕಳೆದ 14 ದಿನಗಳಲ್ಲಿ ಈ ರಾಜ್ಯಗಳಲ್ಲಿ ದೇಶದ ಒಟ್ಟು ಪ್ರಕರಣಗಳಲ್ಲಿ ಶೇ 57 ಮತ್ತು ಶೇ 47ರಷ್ಟು ಸಾವುಗಳು ವರದಿಯಾಗಿವೆ ಎಂಬುದನ್ನು ತೋರಿಸಿದೆ.

ಮಹಾರಾಷ್ಟ್ರದಲ್ಲಿ ದಿನಕ್ಕೆ ಹೊಸ ಪ್ರಕರಣಗಳ ಸಂಖ್ಯೆಯು 47,913 ಅನ್ನು ತಲುಪಿದ್ದು, ಈ ಹಿಂದೆ ವರದಿಯಾದ ಪ್ರಕರಣಗಳಿಗಿಂತ ಎರಡು ಪಟ್ಟು ಗರಿಷ್ಠ ಹೆಚ್ಚಳವಾಗಿದೆ. ಇದೇ ಅವಧಿಯಲ್ಲಿ ದೇಶದ ಒಟ್ಟು ಪ್ರಕರಣಗಳಲ್ಲಿ ಪಂಜಾಬ್‌ನಲ್ಲಿ ಶೇ 4.5ರಷ್ಟು ಪ್ರಕರಣಗಳಿದ್ದರೆ, ಒಟ್ಟು ಸಾವುಗಳಲ್ಲಿ ಶೇ. 16.3 ರಷ್ಟು ಸಾವುಗಳು ವರದಿಯಾಗಿದೆ ಎಂಬುದು ಕಳವಳಕಾರಿ ಸಂಗತಿಯಾಗಿದೆ ಎಂದು ಹೇಳಿಕೆ ತಿಳಿಸಿದೆ.

ಅದೇ ರೀತಿ, ಕಳೆದ 14 ದಿನಗಳಲ್ಲಿ ಛತ್ತೀಸ್‌ಗಡದಲ್ಲಿ ದೇಶಾದ್ಯಂತ ಒಟ್ಟು ಪ್ರಕರಣಗಳಲ್ಲಿ ಶೇ 4.3 ರಷ್ಟು ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ ಒಟ್ಟು ಸಾವುಗಳ ಪ್ರಮಾಣ ಶೇ 7ಕ್ಕೂ ಹೆಚ್ಚಾಗಿದೆ. 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ದೇಶದ ಒಟ್ಟು ಪ್ರಕರಣಗಳ ಪೈಕಿ ಶೇ 91.4 ಮತ್ತು ಶೇ 90.9ರಷ್ಟು ಸಾವುಗಳು ವರದಿಯಾಗಿವೆ.

ಹೆಚ್ಚಿನ ಪ್ರಕರಣಗಳು ಮತ್ತು ಸಾವುಗಳನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕ ಆರೋಗ್ಯ ತಜ್ಞರು ಮತ್ತು ವೈದ್ಯರನ್ನು ಒಳಗೊಂಡ ಕೇಂದ್ರದ ತಂಡಗಳನ್ನು ಮಹಾರಾಷ್ಟ್ರಕ್ಕೆ ಕಳುಹಿಸಬೇಕೆಂದು ಮೋದಿ ನಿರ್ದೇಶನ ನೀಡಿದರು ಮತ್ತು ಪಂಜಾಬ್ ಮತ್ತು ಛತ್ತೀಸಗಡದಲ್ಲಿಯೂ ಸಹ ಹೆಚ್ಚಿನ ಸಂಖ್ಯೆಯ ಸಾವುಗಳು ಸಂಭವಿಸಿವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸುಸ್ಥಿರ ಕೋವಿಡ್-19 ನಿರ್ವಹಣೆಗೆ, ಸಮುದಾಯದ ಅರಿವು ಮತ್ತು ಅದರ ಒಳಗೊಳ್ಳುವಿಕೆ ಅತ್ಯುನ್ನತವಾಗಿದೆ ಮತ್ತು 'ಜನ ಭಗೀದಾರಿ' ಮತ್ತು 'ಜನ ಆಂದೋಲನ್' ಅನ್ನು ಮುಂದುವರಿಸುವ ಅವಶ್ಯಕತೆಯಿದೆ ಎಂದು ಮೋದಿ ಹೇಳಿದರು. 100 ಪ್ರತಿಶತ ಮಾಸ್ಕ್ ಬಳಕೆ, ವೈಯಕ್ತಿಕ ನೈರ್ಮಲ್ಯ ಮತ್ತು ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು ಮತ್ತು ಆರೋಗ್ಯ ಸೌಲಭ್ಯಗಳಲ್ಲಿ ನೈರ್ಮಲ್ಯಕ್ಕೆ ಒತ್ತು ನೀಡುವ ಕೋವಿಡ್-19 ಮಾರ್ಗಸೂಚಿಗಳ ವಿಶೇಷ ಅಭಿಯಾನವನ್ನು ಏಪ್ರಿಲ್ 6-14ರ ನಡುವೆ ಆಯೋಜಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT