ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ಬೆದರಿಕೆ ಎದುರಿಸಲು ಸಜ್ಜಾಗಿರಿ: ಸೇನಾ ಪಡೆಗಳಿಗೆ ಪ್ರಧಾನಿ ಮೋದಿ ಸಲಹೆ

ಭೋಪಾಲ್‌: ಸಶಸ್ತ್ರ ಪಡೆಗಳ ಸನ್ನದ್ಧತೆ ಪರಿಶೀಲಿಸಿದ ಮೋದಿ
Last Updated 1 ಏಪ್ರಿಲ್ 2023, 16:19 IST
ಅಕ್ಷರ ಗಾತ್ರ

ನವದೆಹಲಿ: ಭದ್ರತೆಗೆ ಸಂಬಂಧಿಸಿ ದೇಶದ ಮುಂದಿರುವ ಹೊಸ ಬೆದರಿಕೆಗಳನ್ನು ಸಮರ್ಥವಾಗಿ ಎದುರಿಸಲು ಮೂರು ಸಶಸ್ತ್ರ ಪಡೆಗಳು ಸಜ್ಜಾಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು.

ಇಲ್ಲಿ ನಡೆದ ಭೂ ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಕಮಾಂಡರ್‌ಗಳ ಸಮಾವೇಶದಲ್ಲಿ ಅವರು ಮಾತನಾಡಿದರು.

ಸಶಸ್ತ್ರ ಪಡೆಗಳಿಗೆ ಅಗತ್ಯವಿರುವ ಶಸ್ತ್ರಾಸ್ತ್ರಗಳು ಹಾಗೂ ತಂತ್ರಜ್ಞಾನವನ್ನು ಒದಗಿಸಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂಬುದಾಗಿ ಪ್ರಧಾನಿ ಹೇಳಿದರು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಇದೇ ವೇಳೆ, ಮೂರು ಪಡೆಗಳ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿದ ಪ್ರಧಾನಿ, ಅವುಗಳ ಸನ್ನದ್ಧತೆಯನ್ನು ಪರಿಶೀಲಿಸಿದರು ಎಂದೂ ಸಚಿವಾಲಯ ತಿಳಿಸಿದೆ.

ಗಡಿಯಾಚೆಗಿನ ಭಯೋತ್ಪಾದನೆ, ಗಡಿಯಲ್ಲಿ ಚೀನಾ ಹಾಗೂ ಪಾಕಿಸ್ತಾನದಿಂದ ಒದಗಿರುವ ಬೆದರಿಕೆಗಳು, ಅಗ್ನಿಪಥ ಯೋಜನೆಯ ಅನುಷ್ಠಾನ, ನೌಕಾಪಡೆಯ ಸಾಮರ್ಥ್ಯ ವೃದ್ಧಿ ಸೇರಿದಂತೆ ಹಲವಾರು ಮಹತ್ವದ ವಿಷಯಗಳು ಕುರಿತು ಸಹ ಚರ್ಚೆ ನಡೆಯಿತು ಎಂದು ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT