ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಮೋದಿ ಕಳುಹಿಸಿದ್ದಾರೆ': ಬ್ಯಾಂಕ್‌ನಿಂದ ತಪ್ಪಾಗಿ ಬಂದ ಹಣ ಹಿಂದಿರುಗಿಸದ ವ್ಯಕ್ತಿ

Last Updated 15 ಸೆಪ್ಟೆಂಬರ್ 2021, 15:09 IST
ಅಕ್ಷರ ಗಾತ್ರ

ಪಾಟ್ನಾ: ಬಿಹಾರದ ಖಗರಿಯಾ ಜಿಲ್ಲೆಯ ವ್ಯಕ್ತಿಯೊಬ್ಬ ಬ್ಯಾಂಕ್ ದೋಷದಿಂದ ತನ್ನ ಖಾತೆಗೆ ಜಮೆಯಾದ ₹ 5.5 ಲಕ್ಷ ಹಣವನ್ನು ಹಿಂದಿರುಗಿಸದೆ ‘ಪ್ರಧಾನಿ ನರೇಂದ್ರ ಮೋದಿ ಕಳುಹಿಸಿದ್ದಾರೆ’ ಎಂದು ಪಟ್ಟು ಹಿಡಿದಿದ್ದಾನೆ.

ಖಗರಿಯಾದ ಗ್ರಾಮೀಣ ಬ್ಯಾಂಕ್‌ನಿಂದ ಹಣವನ್ನು ಮಾನ್ಸಿ ಪೊಲೀಸ್ ಠಾಣೆ ವ್ಯಾಪ್ತಿಯ ಬಕ್ತಿಯಾರ್‌ಪುರ್ ಗ್ರಾಮದ ರಂಜಿತ್ ದಾಸ್‌ ಎಂಬವರಿಗೆ ತಪ್ಪಾಗಿ ವರ್ಗಾವಣೆ ಮಾಡಲಾಗಿದೆ. ಹಲವು ನೋಟಿಸ್‌ಗಳ ಹೊರತಾಗಿಯೂ ಹಣವನ್ನು ಹಿಂದಿರುಗಿಸದ ದಾಸ್, ಹಣವನ್ನು ಖರ್ಚು ಮಾಡಿದ್ದೇನೆ ಎಂದು ಹೇಳುತ್ತಿದ್ದಾನೆ.

‘ಈ ವರ್ಷದ ಮಾರ್ಚ್‌ನಲ್ಲಿ ನಾನು ಹಣವನ್ನು ಸ್ವೀಕರಿಸಿದಾಗ ನನಗೆ ತುಂಬಾ ಸಂತೋಷವಾಯಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ ₹ 15 ಲಕ್ಷ ಹಣವನ್ನು ಹಾಕುತ್ತಿದ್ದಾರೆ. ಅದರ ಮೊದಲ ಕಂತು ಇದಾಗಿರಬಹುದು ಎಂದು ಭಾವಿಸಿ ಎಲ್ಲ ಹಣವನ್ನು ಖರ್ಚು ಮಾಡಿದೆ. ಈಗ, ನನ್ನ ಬ್ಯಾಂಕ್ ಖಾತೆಯಲ್ಲಿ ಮತ್ತು ನನ್ನ ಬಳಿ ಹಣವಿಲ್ಲ’ ಎಂದು ಬಂಧಿತನಾಗಿರುವ ದಾಸ್ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾನೆ.

‘ಬ್ಯಾಂಕ್ ಮ್ಯಾನೇಜರ್ ನೀಡಿದ ದೂರಿನ ಮೇರೆಗೆ ನಾವು ರಂಜಿತ್ ದಾಸ್ ಅವರನ್ನು ಬಂಧಿಸಿದ್ದೇವೆ. ಹೆಚ್ಚಿನ ತನಿಖೆ ನಡೆಯುತ್ತಿದೆ’ ಎಂದು ಮಾನ್ಸಿ ಪೊಲೀಸ್ ಠಾಣೆಯ ಠಾಣಾಧಿಕಾರಿ ದೀಪಕ್ ಕುಮಾರ್ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT