ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು–ಮೈಸೂರು ದಶಪಥ ಹೆದ್ದಾರಿಯ ಚಿತ್ರಗಳನ್ನು ಹಂಚಿಕೊಂಡ ಪ್ರಧಾನಿ ಮೋದಿ

Last Updated 11 ಮಾರ್ಚ್ 2023, 14:34 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ(ಮಾ.12) ಬಹು ನಿರೀಕ್ಷಿತ ಬೆಂಗಳೂರು–ಮೈಸೂರು ದಶಪಥ ಎಕ್ಸ್‌ಪ್ರೆಸ್‌ವೇಯನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಎಕ್ಸ್‌ಪ್ರೆಸ್‌ವೇ ಫೋಟೋಗಳನ್ನು ತಮ್ಮ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಭಾನುವಾರ(ಮಾರ್ಚ್ 12)ದಂದು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ದೇಶಕ್ಕೆ ಸಮರ್ಪಣೆಯಾಗಲಿದೆ. ಮೈಸೂರು-ಕುಶಾಲನಗರ ಹೆದ್ದಾರಿ ಕಾಮಗಾರಿಗೂ ಶಂಕುಸ್ಥಾಪನೆ ನಡೆಯಲಿದೆ. ಈ ಯೋಜನೆಗಳು ಸಂಪರ್ಕ ಮತ್ತು ಸಾಮಾಜಿಕ-ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುತ್ತವೆ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದೇನೆ. ₹16 ಸಾವಿರ ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಾಗುವುದು. ಹಾಗೂ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣದಲ್ಲಿ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್‌ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಾಗುವುದು ಎಂದು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT