ಶನಿವಾರ, ಫೆಬ್ರವರಿ 27, 2021
30 °C

ಪ್ರಧಾನಿ ಮೋದಿ ಲಸಿಕೆ ಪಡೆದು ಜನರ ಸಂದೇಹ ನಿವಾರಿಸಲಿ: ಪ್ರಕಾಶ್‌ ಅಂಬೇಡ್ಕರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಮೊದಲು ಕೋವಿಡ್‌ ಲಸಿಕೆಯನ್ನು ಹಾಕಿಸಿಕೊಂಡು ಜನರ ಮನಸ್ಸಿನಲ್ಲಿರುವ ಸಂದೇಹಗಳನ್ನು ನಿವಾರಿಸಬೇಕು ಎಂದು ಅಂಬೇಡ್ಕರ್‌ ಮೊಮ್ಮಗ ಹಾಗೂ ವಂಚಿತ ಬಹುಜನ ಅಗಾಡಿ(ವಿಬಿಎ)ಯ ಸ್ಥಾಪಕ ಪ್ರಕಾಶ್‌ ಅಂಬೇಡ್ಕರ್‌ ಶನಿವಾರ ತಿಳಿಸಿದ್ದಾರೆ.

ಪ್ರಧಾನಮಂತ್ರಿ ಮತ್ತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮೊದಲು ಕೊರೊನಾ ವೈರಸ್‌ ಲಸಿಕೆಯನ್ನು ಹಾಕಿಸಿಕೊಂಡು ಜನರ ಮನಸ್ಸಿನಲ್ಲಿರುವ ಎಲ್ಲಾ ಸಂದೇಹಗಳನ್ನು ನಿವಾರಿಸಬೇಕು. ಅವರು ಲಸಿಕೆ ಪಡೆದ ನಂತರ ನಾನೂ ಕೂಡ ಲಸಿಕೆ ಹಾಕಿಸಿಕೊಳ್ಳಲು ಸಿದ್ಧ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮೂರು ಕೃಷಿ ಕಾಯ್ದೆ ರದ್ದು ಮಾಡಬೇಕು ಎಂದು ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ವಿಬಿಎ ಬೆಂಬಲ ನೀಡಿದೆ ಎಂದರು. ಇದೇ 27ರಂದು ನೂತನ ಕೃಷಿ ಕಾಯ್ದೆಯನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿ ಮಹಾರಾಷ್ಟ್ರದಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಕಾಂಗ್ರೆಸ್, ಸಿಪಿಐ ಮತ್ತು ಸಿಪಿಐ (ಎಂ) ಸೇರಿದಂತೆ ಪ್ರತಿಪಕ್ಷಗಳು ರೈತರ ಪ್ರತಿಭಟನೆಗೆ ಬೆಂಬಲ ನೀಡುವಲ್ಲಿ ವಿಫಲವಾಗಿವೆ ಎಂದು ಅವರು ಆರೋಪಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು