ಶನಿವಾರ, ಆಗಸ್ಟ್ 20, 2022
21 °C

ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಬೆಂಬಲ: ಮ್ಯಾಕ್ರನ್‌ಗೆ ಮೋದಿ ಅಭಯ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಭಯೋತ್ಪಾದನೆ, ಉಗ್ರವಾದ ಹಾಗೂ ತೀವ್ರವಾದದ ವಿರುದ್ಧದ ನಿಮ್ಮ ಹೋರಾಟಕ್ಕೆ ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್‌ ಅಧ್ಯಕ್ಷ ಎಮ್ಯಾನ್ಯುಯೆಲ್‌ ಮ್ಯಾಕ್ರನ್‌ ಅವರಿಗೆ ಅಭಯ ನೀಡಿದ್ದಾರೆ.

‘ಮ್ಯಾಕ್ರನ್‌ ಅವರೊಂದಿಗೆ ದೂರವಾಣಿ ಮೂಲಕ ಸೋಮವಾರ ಮಾತನಾಡಿದ ಮೋದಿ, ಇತ್ತೀಚೆಗೆ ಫ್ರಾನ್ಸ್‌ನಲ್ಲಿ ನಡೆದ ಭಯೋತ್ಪಾದನಾ ದಾಳಿಯ ಕುರಿತು ವಿಷಾದ ವ್ಯಕ್ತಪಡಿಸಿದರು’ ಎಂದು ಪ್ರಧಾನಿ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

‘ಕೋವಿಡ್‌ ನಂತರದ ಕಾಲಘಟ್ಟದಲ್ಲಿ ಎದುರಿಸಬೇಕಾದ ಸವಾಲುಗಳು ಹಾಗೂ ಅವಕಾಶಗಳ ಕುರಿತು ಗೆಳೆಯ ಮ್ಯಾಕ್ರನ್‌ ಜೊತೆ ಮಾತನಾಡಿದ್ದೇನೆ. ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿಯೂ ತಿಳಿಸಿದ್ದೇನೆ’ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು