ನಿವಾರ್: ಮೃತರಿಗೆ ₹ 2 ಲಕ್ಷ, ಗಾಯಾಳುಗಳಿಗೆ ₹ 50,000 ಪರಿಹಾರ ಘೋಷಿಸಿದ ಕೇಂದ್ರ

ನವದೆಹಲಿ: ನಿವಾರ್ ಚಂಡಮಾರುತದ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಮೃತರ ಕುಟುಂಬದವರಿಗೆ ₹ 2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹ 50,000 ಪರಿಹಾರ ಘೋಷಿಸಿದ್ದಾರೆ.
'ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗೆ ಸಹಾಯ ಮಾಡಲು ಕೇಂದ್ರ ತಂಡಗಳನ್ನು ತಮಿಳುನಾಡಿಗೆ ಕಳುಹಿಸಲಾಗುತ್ತಿದೆ' ಎಂದು ಪ್ರಧಾನಿ ಕಚೇರಿ (ಪಿಎಂಒ) ಟ್ವೀಟ್ ಮಾಡಿದೆ.
ಚಂಡಮಾರುತದಿಂದ ಮೃತಪಟ್ಟವರ ಬಗ್ಗೆ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸಿದರು. 'ಮೃತರ ಕುಟುಂಬದವರಿಗೆ ತಲಾ ₹2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹ 50,000 ಪರಿಹಾರವನ್ನು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಲಾಗುವುದು' ಎಂದು ಪಿಎಂಒ ತಿಳಿಸಿದೆ.
ತಮಿಳುನಾಡಿನ ಕಡಲೂರು ಜಿಲ್ಲೆಯ ಹಾನಿ ಪ್ರದೇಶಗಳಿಗೆ ತಮಿಳುನಾಡು ಮುಖ್ಯಮಂತ್ರಿ ಗುರುವಾರ ಭೇಟಿ ನೀಡಿದ್ದರು ಮತ್ತು ನಿವಾರ್ ಚಂಡಮಾರುತದಿಂದ ಉಂಟಾದ ಒಟ್ಟು ಹಾನಿಯ ಅಂದಾಜು ಮಾಡಿದ ನಂತರ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದ್ದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.