ಭಾನುವಾರ, ಜೂನ್ 20, 2021
28 °C

ಕೋವಿಡ್: ಮಹಾರಾಷ್ಟ್ರ, ಹಿಮಾಚಲಪ್ರದೇಶ, ಮಧ್ಯಪ್ರದೇಶ ಸಿಎಂಗಳ ಜೊತೆ ಮೋದಿ ಮಾತುಕತೆ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಮತ್ತು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರೊಂದಿಗೆ ಪ್ರತ್ಯೇಕ ದೂರವಾಣಿ ಕರೆಗಳಲ್ಲಿ ಮಾತನಾಡಿದ್ದು, ಆಯಾ ರಾಜ್ಯಗಳಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಚರ್ಚಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಕೋವಿಡ್ ವ್ಯಾಕ್ಸಿನೇಷನ್‌ಗಾಗಿ ಪ್ರತ್ಯೇಕ ಅಪ್ಲಿಕೇಶನ್ ಅಭಿವೃದ್ಧಿಪಡಿಸಲು ಅನುಮತಿ ಕೋರಿ ಬರೆದಿರುವ ಪತ್ರದ ಬಗ್ಗೆ ಪ್ರಧಾನ ಮಂತ್ರಿ ಮತ್ತು ಠಾಕ್ರೆ ನಡುವಿನ ಸಂಭಾಷಣೆ ವೇಳೆ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.

ಕೊರೊನಾ ಸೋಂಕಿನ ಎರಡನೇ ಅಲೆ ಅತಿ ಹೆಚ್ಚು ಪರಿಣಾಮ ಬೀರಿರುವ ರಾಜ್ಯ ಮಹಾರಾಷ್ಟ್ರವಾಗಿದೆ. ದೇಸದಲ್ಲೇ ಹೆಚ್ಚು ಕೋವಿಡ್ ಪ್ರಕರಣಗಳು ಅಲ್ಲಿವೆ. ಮುಂಬೈ ಸೇರಿದಂತೆ ಕೆಲವು ನಗರಗಳು ಸುಧಾರಣೆ ಕಂಡಿದೆಯಾದರೂ ಸಹ ರಾಜ್ಯದ ಅನೇಕ ಭಾಗಗಳಲ್ಲಿನ ಪರಿಸ್ಥಿತಿ ಕಳವಳಕಾರಿಯಾಗಿದೆ.

ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 54,000 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವ

ಒಂದು ದಿನದಲ್ಲಿ ವರದಿಯಾದ ಹೊಸ ಪ್ರಕರಣಗಳಲ್ಲಿ ಶೇಕಡಾ 72 ರಷ್ಟು ಪ್ರಕರಣಗಳು ಮಹಾರಾಷ್ಟ್ರದಲ್ಲಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಪ್ರಧಾನಿ ದೂರವಾಣಿ ಕರೆ ಬಳಿಕ ಟ್ವೀಟ್‌ ಮಾಡಿರುವ, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯದಲ್ಲಿ ‘ನಿರಂತರವಾಗಿ ಕಡಿಮೆಯಾಗುತ್ತಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತು ವೇಗವಾಗಿ ಹೆಚ್ಚುತ್ತಿರುವ ಚೇತರಿಕೆ ದರ’ದ ಕುರಿತು ಪ್ರಧಾನಿ ಮೋದಿ ಅವರಿಗೆ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ. ಜನತಾ ಕರ್ಫ್ಯೂ ಸೇರಿದಂತೆ ವೈರಸ್ ವಿರುದ್ಧ ಹೋರಾಡಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಅವರು ಪ್ರಧಾನ ಮಂತ್ರಿಯೊಂದಿಗೆ ಚರ್ಚಿಸಿರುವುದಾಗಿ ಹೇಳಿದ್ದಾರೆ.

ಅದೇ ರೀತಿ, ಕೋವಿಡ್ ರೋಗಿಗಳಿಗೆ ಆಮ್ಲಜನಕವನ್ನು ಒದಗಿಸಲು ರಾಜ್ಯ ಸರ್ಕಾರ ಏನು ಮಾಡುತ್ತಿದೆ, ಆಸ್ಪತ್ರೆಯ ಹಾಸಿಗೆಗಳ ಸ್ಥಿತಿ ಮತ್ತು ವ್ಯಾಕ್ಸಿನೇಷನ್ ಡ್ರೈವ್ ಕುರಿತು ಮೋದಿಗೆ ಮಾಹಿತಿ ನೀಡಿದ್ದಾಗಿ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಹೇಳಿದ್ದಾರೆ.

ಹಿಮಾಚಲದಲ್ಲಿ ಶುಕ್ರವಾರ 4,177 ಹೊಸ ಪ್ರಕರಣ ದಾಖಲಾಗಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು