ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್: ಆ್ಯಂಬುಲೆನ್ಸ್‌ಗೆ ದಾರಿ ಬಿಟ್ಟುಕೊಟ್ಟ ಪ್ರಧಾನಿ ಮೋದಿ ಬೆಂಗಾವಲು ಪಡೆ

Last Updated 1 ಡಿಸೆಂಬರ್ 2022, 14:34 IST
ಅಕ್ಷರ ಗಾತ್ರ

ಅಹಮದಾಬಾದ್: ಗುಜರಾತ್‌ನಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಂಜೆ ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿ ಆ್ಯಂಬುಲೆನ್ಸ್‌ಗೆ ದಾರಿಬಿಟ್ಟುಕೊಟ್ಟಿದ್ದಾರೆ.

ಚುನಾವಣೆ ಪ್ರಚಾರದ ಭಾಗವಾಗಿ ಪ್ರಧಾನಿ ಮೋದಿ ಅವರು ಅಹಮದಾಬಾದ್‌ನಲ್ಲಿ ಬೃಹತ್ ರೋಡ್‌ ಶೋ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಈ ವಿಡಿಯೊವನ್ನು ಸುದ್ದಿಸಂಸ್ಥೆ ಎಎನ್‌ಐ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ವೀಕ್ಷಿಸಿರುವ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ಮೋದಿಯನ್ನು ಪ್ರಧಾನ ಸೇವಕ ಎಂದು ಕರೆಯುವುದು ವ್ಯರ್ಥವಲ್ಲ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಗುಜರಾತ್‌ನಲ್ಲಿ ಡಿ.5ರಂದು ನಡೆಯಲಿರುವ ಎರಡನೇ ಹಂತದ ಮತದಾನ ನಡೆಯಲಿದ್ದು, ಡಿ.8ರಂದು ಮತ ಎಣಿಕೆ ನಡೆಯಲಿದೆ.

ಕಳೆದ ತಿಂಗಳು ಗುಜರಾತ್‌ ಭೇಟಿಯ ವೇಳೆಯೂ ಮೋದಿ ಆ್ಯಂಬುಲೆನ್ಸ್‌ ಒಂದಕ್ಕೆ ಜಾಗ ಬಿಟ್ಟಿದ್ದರು.

ಮೊದಲ ಹಂತದಲ್ಲಿ ಶೇ 57ರಷ್ಟು ಮತದಾನ
ಗುಜರಾತ್ ವಿಧಾನಸಭೆಗೆ ಇಂದು (ಗುರುವಾರ) ನಡೆದ ಮೊದಲ ಹಂತದ ಚುನಾವಣೆಯಲ್ಲಿ ಶೇ 56.88 ರಷ್ಟು ಮತದಾನವಾಗಿದೆ.

ಬೆಳಿಗ್ಗೆ 8 ಗಂಟೆಗೆ ಆರಂಭವಾದ ಮತದಾನ ಸಂಜೆ 5 ಗಂಟೆವರೆಗೂ ನಡೆದಿದೆ. ಮೊದಲ ಹಂತದಲ್ಲಿ ಒಟ್ಟಾರೆ ಶೇ 56.88 ರಷ್ಟು ಮತದಾನವಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ಸೌರಾಷ್ಟ್ರ, ಕಛ್, ರಾಜ್ಯದ ದಕ್ಷಿಣ ಭಾಗ ಒಳಗೊಂಡ 19 ಜಿಲ್ಲೆಗಳ 89 ಕ್ಷೇತ್ರಗಳಿಗೆ ಮತದಾನ ನಡೆದಿದೆ. 70 ಮಹಿಳೆಯರು ಸೇರಿ ಒಟ್ಟಾರೆ 788 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ರಾಜ್ಯದ ಒಟ್ಟು 4.91 ಕೋಟಿ ಮತದಾರರ ಪೈಕಿ ಸುಮಾರು 2 ಕೋಟಿ ಜನರು ಮತ ಚಲಾವಣೆ ಮಾಡಿದ್ದಾರೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT