ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಎಂಯು ಶತಮಾನೋತ್ಸವ ಕಾರ್ಯಕ್ರಮಕ್ಕೆ ಮೋದಿ

Last Updated 16 ಡಿಸೆಂಬರ್ 2020, 14:22 IST
ಅಕ್ಷರ ಗಾತ್ರ

ಅಲೀಗಡ: ಅಲೀಗಡ ಮುಸ್ಲಿಂ ವಿಶ್ವವಿದ್ಯಾಲಯದ(ಎಎಂಯು) ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಲಿಂಕ್‌ ಮುಖಾಂತರ ಮುಖ್ಯಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಪ್ರಕಟಣೆಯೊಂದು ತಿಳಿಸಿದೆ.

ಆನ್‌ಲೈನ್‌ ಮೂಲಕ ಮೋದಿ ಅವರು ಹಾಗೂ ಕೇಂದ್ರ ಶಿಕ್ಷಣ ಸಚಿವ ರಮೇಶ್‌ ಪೋಖ್ರಿಯಾಲ್‌ ನಿಶಾಂಕ್‌ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ. ‘ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಎಂಯು ಸಮುದಾಯದ ಪರವಾಗಿ ಧನ್ಯವಾದಗಳು’ ಎಂದು ಎಎಂಯು ಕುಲಪತಿ ಪ್ರೊ.ತಾರಿಖ್‌ ಮನ್ಸೂರ್‌ ತಿಳಿಸಿದ್ದಾರೆ.

ಈ ಕಾರ್ಯಕ್ರಮವನ್ನು ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಾಂಧಿ ಜಯಂತಿಯಂತೆ ರಾಜಕೀಯದಿಂದ ಹೊರಗಿಡಬೇಕು ಎಂದು ಸಂಬಂಧಿಸಿದ ಎಲ್ಲರಿಗೂ ಕುಲಪತಿ ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT