ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

24ರಂದು ವಾಷಿಂಗ್ಟನ್‌ಗೆ ಪ್ರಧಾನಿ; ಕ್ವಾಡ್‌ ರಾಷ್ಟ್ರಗಳ ಸಭೆಯಲ್ಲಿ ಭಾಗಿ

Last Updated 14 ಸೆಪ್ಟೆಂಬರ್ 2021, 14:53 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮುಂದಿನ ವಾರ ಅಮೆರಿಕಕ್ಕೆ ಭೇಟಿ ನೀಡಲಿದ್ದು, ವಾಷಿಂಗ್ಟನ್‌ನಲ್ಲಿ ಸೆ. 24ರಂದು ನಡೆಯಲಿರುವ ಕ್ವಾಡ್‌ ರಾಷ್ಟ್ರಗಳ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ಅಫ್ಗಾನಿಸ್ತಾನ ಬಿಕ್ಕಟ್ಟು ಸೇರಿದಂತೆ ಜಾಗತಿಕ ಪ್ರಚಲಿತ ಸವಾಲುಗಳು, ಕೋವಿಡ್‌ ಸಂಕಷ್ಟ ಸೇರಿದಂತೆ ವಿವಿಧ ವಿಷಯಗಳು ಸಭೆಯಲ್ಲಿ ಚರ್ಚೆಯಾಗುವ ನಿರೀಕ್ಷೆಯಿದೆ. ಜೋ ಬೈಡನ್‌ ಅಮೆರಿಕ ಅಧ್ಯಕ್ಷರಾದ ಬಳಿಕ ಇದು ಪ್ರಧಾನಿಯ ಮೊದಲ ಭೇಟಿ.

ಸೆಪ್ಟೆಂಬರ್ 25ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿಯೂ ಪ್ರಧಾನಿ ಮಾತನಾಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಂಗಳವಾರ ಪ್ರಕಟಿಸಿದೆ.

ಅಲ್ಲದೆ, ವಾಷಿಂಗ್ಟನ್‌ನಲ್ಲಿ ಮೋದಿ ಅವರು ಅಧ್ಯಕ್ಷ ಜೋ ಬೈಡನ್‌ ಮತ್ತು ಆಸ್ಟ್ರೇಲಿಯ ಪ್ರಧಾನಿ ಸ್ಕಾಟ್‌ ಮಾರಿಸನ್‌ ಅವರ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸುವ ನಿರೀಕ್ಷೆಯೂ ಇದೆ. 23ರಂದೇ ಶ್ವೇತಭವನದಲ್ಲಿ ಮೋದಿ–ಬೈಡನ್‌ ಭೇಟಿ ನಡೆಯಲಿದೆ. ಉಭಯ ಮುಖಂಡರು ಈಗಾಗಲೇ ವರ್ಚುವಲ್‌ ಸ್ವರೂಪದಲ್ಲಿ ಅನೇಕ ಬಾರಿ ಚರ್ಚಿಸಿದ್ದಾರೆ.

ಪ್ರಧಾನಮಂತ್ರಿ ಮೋದಿ ಕಳೆದ ಬಾರಿ ಸೆಪ್ಟೆಂಬರ್ 2019ರಲ್ಲಿ ಅಮೆರಿಕಕ್ಕೆ ಭೇಟಿ ನೀಡಿದ್ದರು. ಆಗ ಮೋದಿ ಮತ್ತು ಹಿಂದಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರು ಹ್ಯೂಸ್ಟನ್‌ನಲ್ಲಿ ಹೌಡಿ–ಮೋದಿ ಕಾರ್ಯಕ್ರಮದಲ್ಲಿ ಜಂಟಿಯಾಗಿ ಮಾತನಾಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT