ಸೋಮವಾರ, ಮೇ 10, 2021
21 °C

ವಾರಾಣಸಿಯಲ್ಲಿ ಕೋವಿಡ್‌ ಉಲ್ಬಣ: ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಭೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿನ ಕೋವಿಡ್‌ ಪರಿಸ್ಥಿತಿಗಳ ಬಗ್ಗೆ ಪರಿಶೀಲನೆ ನಡೆಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಿಗ್ಗೆ 11 ಗಂಟೆಗೆ ಸಭೆ ಕರೆದಿದ್ದಾರೆ.

‘ಪ್ರಧಾನಿ ಅವರು ಹಿರಿಯ ಅಧಿಕಾರಿಗಳು, ಸ್ಥಳೀಯ ಆಡಳಿತಗಳ ಅಧಿಕಾರಿಗಳು, ವೈದ್ಯರ ಜತೆಗೆ ಸಮಾಲೋಚನೆ ನಡೆಸಲಿದ್ದಾರೆ’ ಎಂದು ಅವರ ಕಚೇರಿಯ ಪ್ರಕಟಣೆ ತಿಳಿಸಿದೆ.

ಉತ್ತರ ಪ್ರದೇಶದ ಇತರ ನಗರಗಳಂತೆ ವಾರಾಣಸಿಯಲ್ಲಿ ಸಹ ಕೋವಿಡ್‌ ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚಳವಾಗಿದ್ದು, ಅಲ್ಲಿನ ಲೋಕಸಭಾ ಸದಸ್ಯರಾಗಿರುವ ನರೇಂದ್ರ ಮೋದಿ ಅವರು ಪರಿಸ್ಥಿತಿಯ ಅವಲೋಕನ ಮತ್ತು ಮಾರ್ಗದರ್ಶನಕ್ಕಾಗಿ ಈ ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ...

ಕೋವಿಡ್: ತೊಂದರೆಗೀಡಾಗಿರುವ ರಾಜ್ಯಗಳಿಗೆ ಮುಂದಿನ ವಾರದೊಳಗೆ ಇನ್ನಷ್ಟು ಲಸಿಕೆ

Covid-19 India Update: 2.61 ಲಕ್ಷ ಹೊಸ ಪ್ರಕರಣ, 1,501 ಮಂದಿ ಸಾವು

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು