ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ಯ್ರಾಂಡ್‌ ಚಾಲೆಂಜ್‌ ವಾರ್ಷಿಕ ಸಭೆ: ಸೋಮವಾರ ಪ್ರಧಾನಿ ಮೋದಿ ಭಾಷಣ

Last Updated 17 ಅಕ್ಟೋಬರ್ 2020, 9:58 IST
ಅಕ್ಷರ ಗಾತ್ರ

ನವದೆಹಲಿ: ‘ಗ್ರ್ಯಾಂಡ್‌ ಚಾಲೆಂಜ್‌’ ಸಂಸ್ಥೆಯ ವಾರ್ಷಿಕ ಸಭೆಯ ಉದ್ಘಾಟನಾ ಕಾರ್ಯಕ್ರಮ ಸೋಮವಾರ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್‌ ಮೂಲಕ ಭಾಷಣ ಮಾಡಲಿದ್ದಾರೆ.

ಗ್ರ್ಯಾಂಡ್‌ ಚಾಲೆಂಜ್‌ ಸಂಸ್ಥೆಯು 15 ವರ್ಷಗಳಿಂದ ಜಾಗತಿಕ ಮಟ್ಟದಲ್ಲಿ ಆರೋಗ್ಯ ಮತ್ತು ಅಭಿವೃದ್ಧಿ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ನೆರವಾಗಿದೆ ಎಂದು ಪ್ರಧಾನಮಂತ್ರಿ ಕಚೇರಿಯು ಶನಿವಾರ ಹೇಳಿಕೆ ಬಿಡುಗಡೆ ಮಾಡಿದೆ.

ಈ ಬಾರಿ ವಾರ್ಷಿಕ ಸಭೆಯು ವಿಡಿಯೊ ಕಾನ್ಫರೆನ್ಸ್‌ ಮೂಲಕ ಇದೇ 19ರಿಂದ 21ರ ತನಕ ನಡೆಯಲಿದೆ. ಇದರಲ್ಲಿ ರಾಜಕೀಯ ನಾಯಕರು, ವಿಜ್ಞಾನಿಗಳು, ಸಂಶೋಧಕರು ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಸುಸ್ಥಿರ ಅಭಿವೃದ್ಧಿ, ಕೋವಿಡ್‌ ನಂತರ ಸಮಾಜದ ಗುರಿಯ ಬಗ್ಗೆ ಚರ್ಚೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಸುಮಾರು 40 ದೇಶಗಳ 1,600 ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಳ್ಳುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT