ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

29ಕ್ಕೆ ವಂದೇ ಭಾರತ ಎಕ್ಸ್‌ಪ್ರೆಸ್‌ಗೆ ಮೋದಿ ಚಾಲನೆ

ಗುಜರಾತ್‌: ₹ 29 ಸಾವಿರ ಕೋಟಿ ಮೊತ್ತದ ಯೋಜನೆಗೆ ಶಂಕುಸ್ಥಾಪನೆ
Last Updated 27 ಸೆಪ್ಟೆಂಬರ್ 2022, 14:08 IST
ಅಕ್ಷರ ಗಾತ್ರ

ನವದೆಹಲಿ: ಇದೇ 29ರಂದು ಗುಜರಾತ್‌ಗೆ ಎರಡು ದಿನಗಳ ಕಾಲ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಗಾಂಧಿನಗರ– ಮುಂಬೈಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ ಏಕ್ಸ್‌ಪ್ರೆಸ್‌ ಹಾಗೂ ಅಹಮದಾಬಾದ್ ಮೆಟ್ರೊ ರೈಲು ಸೇವೆಗೆ ಚಾಲನೆ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ₹ 29 ಸಾವಿರ ಕೋಟಿಗೆ ಹೆಚ್ಚಿನ ಮೊತ್ತದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಮೆಟ್ರೊ ರೈಲು ಯೋಜನೆಗೆ ಚಾಲನೆ ನೀಡಿದ ನಂತರ ಮೋದಿ ಅವರು, ಕಲುಪುರ್ ನಿಲ್ದಾಣದಿಂದ ದೂರದರ್ಶನ ಕೇಂದ್ರ ನಿಲ್ದಾಣದವರೆಗೆ ಮೆಟ್ರೊ ರೈಲಿನಲ್ಲಿ ಪ್ರಯಾಣಿಸಲಿದ್ದಾರೆ. ಭಾವನಗರದಲ್ಲಿ ವಿಶ್ವದ ಮೊದಲ ಸಿಎನ್‌ಜಿ ಟರ್ಮಿನಲ್‌ಗೆ ಶಂಕುಸ್ಥಾಪನೆ ನೇರವೇರಿಸಲಿರುವ ಅವರು, ಗುಜರಾತ್‌ನಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ 36ನೇ ರಾಷ್ಟ್ರೀಯ ಕ್ರೀಡಾಕೂಟವನ್ನೂ ಉದ್ಘಾಟಿಸಲಿದ್ದಾರೆ.

ಅಹಮದಾಬಾದ್‌ನಲ್ಲಿ ನಡೆಯಲಿರುವ ನವರಾತ್ರಿ ಹಬ್ಬದ ಆಚರಣೆಯಲ್ಲೂ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ. ಸೂರತ್‌ನಲ್ಲೇ ₹ 3,400 ಕೋಟಿಗೂ ಅಧಿಕ ಮೊತ್ತದ ಯೋಜನೆಗಳಿಗೆ ಚಾಲನೆ ದೊರೆಯಲಿದೆ. ಅಂತೆಯೇ ಭಾವನಗರದಲ್ಲಿ ಸುಮಾರು ₹5,200 ಕೋಟಿಗೂ ಅಧಿಕ ಮೊತ್ತದ ಅನೇಕ ಯೋಜನೆಗಳಿಗೆ ಮೋದಿ ಶಂಕುಸ್ಥಾಪನೆ ನೆರವೇರಿಸುವರುಎಂದು ಅಧಿಕೃತ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT