ಬುಧವಾರ, ಮಾರ್ಚ್ 22, 2023
33 °C

ಉದ್ಯೋಗ ಮೇಳ: ನಾಳೆ 71,000 ನೇಮಕಾತಿ ಪತ್ರ ವಿತರಿಸಲಿರುವ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಸರ್ಕಾರದ ಉದ್ಯೋಗ ಮೇಳದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವಿಡಿಯೊ ಕಾನ್ಫರೆನ್ಸ್ ಮೂಲಕ 71,000 ಮಂದಿಗೆ ನೇಮಕಾತಿ ಪತ್ರ ವಿತರಣೆ ಮಾಡಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.

ಜೊತೆಗೆ, ನೇಮಕಾತಿ ಪತ್ರ ಪಡೆದವರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಅವರ ಬದ್ಧತೆಯನ್ನು ಈಡೇರಿಸುವತ್ತ ಇದು ಒಂದು ಹೆಜ್ಜೆಯಾಗಿದೆ. ಈ ಮೇಳವು ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸಲು ಹಾಗೂ ಯುವಜನರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ನೇರವಾಗಿ ಭಾಗವಹಿಸಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವಲ್ಲಿ ವೇಗವರ್ಧಕವಾಗಲಿದೆ ಎಂದು ನಿರೀಕ್ಷಿಸಲಾಗಿದೆ ಎಂಬುದಾಗಿ ಪ್ರಧಾನ ಮಂತ್ರಿ ಕಾರ್ಯಾಲಯ ಹೇಳಿದೆ. .

ಅಕ್ಟೋಬರ್ ತಿಂಗಳಲ್ಲಿ 75,000 ಮಂದಿಗೆ ನೇಮಕಾತಿ ಪತ್ರ ವಿತರಿಸಲಾಗಿತ್ತು.

ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳನ್ನು ಹೊರತುಪಡಿಸಿ ದೇಶದ 45 ಕಡೆಗಳಲ್ಲಿ ನಾಳೆ ಭೌತಿಕವಾಗಿ ನೇಮಕಾತಿ ಪತ್ರಗಳನ್ನು ವಿತರಿಸಲಾಗುತ್ತದೆ.

ಶಿಕ್ಷಕರು, ಉಪನ್ಯಾಸಕರು, ನರ್ಸ್‌ಗಳು, ನರ್ಸಿಂಗ್ ಅಧಿಕಾರಿಗಳು, ವೈದ್ಯರು, ಫಾರ್ಮಾಸಿಸ್ಟ್‌, ರೇಡಿಯೊಗ್ರಾಫರ್ಸ್ ಮತ್ತು ಇತರೆ ತಾಂತ್ರಿಕ ಹಾಗೂ ಪ್ಯಾರಾಮೆಡಿಕಲ್ ಉದ್ಯೋಗಗಳಿಗೆ ನೇಮಕಾತಿ ಪತ್ರ ನೀಡಲಾಗುತ್ತದೆ.

ಕೇಂದ್ರೀಯ ಶಸ್ತ್ರಸಜ್ಜಿತ ಪೊಲೀಸ್ ಪಡೆಗೆ ಗೃಹ ಸಚಿವಾಲಯವು ನೇಮಕಾತಿಗಳನ್ನು ಮಾಡಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು