ನವದೆಹಲಿ: ಕರ್ನಾಟಕದ ತುಮಕೂರಿನಲ್ಲಿರುವ ಸರಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ ಹೆಲಿಕಾಪ್ಟರ್ ಉತ್ಪಾದನಾ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಉದ್ಘಾಟಿಸಲಿದ್ದಾರೆ.

ಹೆಲಿಕಾಪ್ಟರ್ ಉತ್ಪಾದನಾ ಘಟಕವು 615 ಎಕರೆಯಲ್ಲಿ ಹರಡಿಕೊಂಡಿದೆ. ದೇಶದ ಎಲ್ಲಾ ಹೆಲಿಕಾಪ್ಟರ್‌ಗಳ ಮೂಲಭೂತ ಅವಶ್ಯಕತೆಗಳನ್ನು ಪೂರೈಸುವ ಈ ಘಟಕ ಕಾರ್ಯನಿರ್ವಹಿಸಲಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಈ ಕಾರ್ಖಾನೆಯು ಭಾರತದ ಅತಿದೊಡ್ಡ ಹೆಲಿಕಾಪ್ಟರ್ ಉತ್ಪಾದನಾ ಘಟಕ. ಆರಂಭದಲ್ಲಿ ಲಘು ಹೆಲಿಕಾಪ್ಟರ್‌ಗಳನ್ನು (ಎಲ್‌ಯುಎಚ್‌ಎಸ್) ಉತ್ಪಾದಿಸುತ್ತದೆ ಎಂದು ಹೇಳಿದೆ.

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) 3 ರಿಂದ15 ಟನ್‌ಗಳ ಪ್ರಮಾಣದಲ್ಲಿ 1,000ಕ್ಕೂ ಹೆಚ್ಚು ಹೆಲಿಕಾಪ್ಟರ್‌ಗಳನ್ನು ಉತ್ಪಾದಿಸಲು ಯೋಜನೆ ರೂಪಿಸಿದೆ. 20 ವರ್ಷಗಳ ಅವಧಿಯಲ್ಲಿ ಒಟ್ಟು ₹4 ಲಕ್ಷ ಕೋಟಿಗೂ ಅಧಿಕ ವ್ಯವಹಾರ ನಡೆಸಲು ನಿರ್ಧಾರಿಸಿದೆ ಎಂದು ತಿಳಿಸಿದೆ.

ಉದ್ಘಾಟನಾ ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಏಕ ಎಂಜಿನ್‌ನ, ಹೆಚ್ಚಿನ ಕುಶಲತೆ ಹೊಂದಿರುವ ಲಘು ಹೆಲಿಕಾಪ್ಟರ್‌ಗಳು ಸಂಪೂರ್ಣ ಸ್ವದೇಶಿ. 3ಟನ್ ತೂಕದ ಶ್ರೇಣಿಯ ಹೆಲಿಕಾಪ್ಟರ್‌ಗಳನ್ನು ವಿವಿದೋದ್ದೇಶಕ್ಕೆ ಬಳಸಲಾಗುತ್ತದೆ. ತಾಂತ್ರಿಕ ವಿಶಿಷ್ಟ ಲಕ್ಷಣಗಳನ್ನು ಹೊಂದಿದೆ. ಆರಂಭದಲ್ಲಿ, ಈ ಕಾರ್ಖಾನೆಯು ವರ್ಷಕ್ಕೆ ಸುಮಾರು 30 ಹೆಲಿಕಾಪ್ಟರ್‌ಗಳನ್ನು ಉತ್ಪಾದಿಸುತ್ತದೆ. ಹಂತ ಹಂತವಾಗಿ 60 ರಿಂದ 90 ಹೆಲಿಕಾಪ್ಟರ್‌ಗಳನ್ನು ತಯಾರಿಸುತ್ತದೆ ಎಂದು ಸಚಿವಾಲಯ ತಿಳಿಸಿದೆ.

ಮೊದಲ ಎಲ್‌ಯುಎಚ್ ವಿಮಾನವನ್ನ ಪರೀಕ್ಷೆಗೆ ಒಳಪಡಿಸಲಾಗಿದೆ, ಶೀಘ್ರದಲ್ಲೇ ಅನಾವರಣಗೊಳ್ಳಲಿದೆ.

ಇದನ್ನು ಓದಿ: ಜಮ್ಮು ಮತ್ತು ಕಾಶ್ಮೀರ | ಗಡಿಯಲ್ಲಿ ನೆಲಬಾಂಬ್ ಸ್ಫೋಟ: ಯೋಧನಿಗೆ ಗಾಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.