ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬುಧವಾರ ರಾಷ್ಟ್ರೀಯ ಯುವ ಉತ್ಸವ: ಪ್ರಧಾನಿ ಉದ್ಘಾಟನೆ

Last Updated 10 ಜನವರಿ 2022, 11:23 IST
ಅಕ್ಷರ ಗಾತ್ರ

ನವದೆಹಲಿ: ಜನವರಿ 12ರಂದು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಪುದುಚೇರಿಯಲ್ಲಿ 25ನೇ ರಾಷ್ಟ್ರೀಯ ಯುವ ಉತ್ಸವವನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ಉದ್ಘಾಟಿಸಲಿದ್ದಾರೆ.

ಸ್ವಾಮಿ ವಿವೇಕಾನಂದರ ಜನ್ಮದಿನವಾದ ಈ ದಿನವನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.

‘ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದರ ಜೊತೆಗೆ ಉತ್ತಮ ಮೌಲ್ಯಗಳನ್ನು ಹಂಚಿಕೊಳ್ಳುವಂತೆ ನನ್ನ ಯುವ ಸ್ನೇಹಿತರಿಗೆ ಸಲಹೆ ನೀಡುತ್ತೇನೆ. ಭಾರತದ ಪ್ರತಿಭಾವಂತ ಯುವ ಜನತೆಯನ್ನು ಕಂಡಾಗ ಹರ್ಷವಾಗುತ್ತದೆ’ ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

ರಾಷ್ಟ್ರ ನಿರ್ಮಾಣದಲ್ಲಿ ಏಕತೆಯ ಒಂದು ಶಕ್ತಿಯಾಗಿ ಯುವ ಜನತೆಯ ಮನಸ್ಸು ರೂಪಿಸುವುದು ಉತ್ಸವದ ಗುರಿಯಾಗಿದೆ ಎಂದು ಪ್ರಧಾನಿ ಕಚೇರಿ ಹೇಳಿದೆ.

ಕೋವಿಡ್‌ ಹಿನ್ನೆಲೆಯಲ್ಲಿ ಈ ವರ್ಷ ಜನವರಿ 12–13ರಂದು ವರ್ಚುವಲ್‌ ರೂಪದಲ್ಲಿ ಉತ್ಸವವನ್ನು ಆಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT