ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ‘ಆತ್ಮನಿರ್ಭರ ನಾರಿಶಕ್ತಿ ಸೆ ಸಂವಾದ್’ ಕಾರ್ಯಕ್ರಮದಲ್ಲಿ ಗುರುವಾರ ಭಾಗಿಯಾಗಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿಯು ಹೇಳಿದೆ.

ದೀನದಯಾಳ್ ಅಂತ್ಯೋದಯ ಯೋಜನೆ– ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್‌ನಡಿಯಲ್ಲಿ(ಡಿಎವೈ–ಎನ್‌ಆರ್‌ಎಲ್‌ಎಂ) ಬರುವ ಮಹಿಳಾ ಸ್ವ ಸಹಾಯ ಸಂಘಗಳ (ಎಸ್‌ಎಚ್‌ಜಿ) ಸದಸ್ಯರೊಂದಿಗೆ ಪ್ರಧಾನಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಲಿದ್ದಾರೆ.

ಈ ವೇಳೆ ದೇಶದ ಸ್ವಸಹಾಯ ಗುಂಪಿನ ಮಹಿಳೆಯರ ಯಶೋಗಾಥೆಗಳ ಸಂಗ್ರಹವನ್ನು ಬಿಡುಗಡೆಗೊಳಿಸಲಿದ್ದಾರೆ’ ಎಂದು ಪ್ರಧಾನಿ ಕಚೇರಿಯು ತಿಳಿಸಿದೆ.

ಅಲ್ಲದೆ 4 ಲಕ್ಷ ಸ್ವಸಹಾಯ ಸಂಘಗಳಿಗೆ ₹1,625 ಕೋಟಿವರೆಗೆ ಬಂಡವಾಳ ಬೆಂಬಲ ನಿಧಿಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ ಪ್ರಕಟಣೆ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.