ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರದಲ್ಲಿ 9 ಹೆದ್ದಾರಿ ಯೋಜನೆಗಳಿಗೆ ನಾಳೆ ಮೋದಿ ಶಂಕುಸ್ಥಾಪನೆ

Last Updated 19 ಸೆಪ್ಟೆಂಬರ್ 2020, 14:54 IST
ಅಕ್ಷರ ಗಾತ್ರ

ನವದೆಹಲಿ: ಬಿಹಾರದಲ್ಲಿ ₹14,258 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ 9 ಹೆದ್ದಾರಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಶಂಕುಸ್ಥಾಪನೆಯನ್ನು ವಿಡಿಯೊ ಕಾನ್ಫರೆನ್ಸ್‌ ಮುಖಾಂತರ ನೆರವೇರಿಸಲಿದ್ದಾರೆ ಎಂದು ಶನಿವಾರ ಪ್ರಧಾನಿ ಕಚೇರಿ ತಿಳಿಸಿದೆ.

ಇದೇ ವೇಳೆ ರಾಜ್ಯದ ಎಲ್ಲ 45,945 ಹಳ್ಳಿಗಳಿಗೆ ಅಂತರ್ಜಾಲ ಸೇವೆ ಸೌಲಭ್ಯ ಕಲ್ಪಿಸಲು ಆಪ್ಟಿಕಲ್‌ ಫೈಬರ್‌ ಕೇಬಲ್‌ ಅಳವಡಿಕೆ ಯೋಜನೆಯನ್ನೂ ಪ್ರಧಾನಿ ಉದ್ಘಾಟಿಸಲಿದ್ದಾರೆ. ಹೆದ್ದಾರಿ ಯೋಜನೆಯಲ್ಲಿ 350 ಕಿ.ಮೀ ರಸ್ತೆ ನಿರ್ಮಾಣವಾಗಲಿದೆ. ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಬಿಹಾರದಲ್ಲಿ ಚುನಾವಣೆ ನಡೆಯಲಿದ್ದು, ಇತ್ತೀಚೆಗಷ್ಟೇ ಹಲವು ಮೂಲಸೌಕರ್ಯ ಯೋಜನೆಗಳನ್ನು ಮೋದಿ ಅವರು ಉದ್ಘಾಟಿಸಿದ್ದರು.

‘ಪ್ರಸ್ತಾವಿತ ಹೊಸ ಹೆದ್ದಾರಿಗಳು ರಾಜ್ಯದ ಅಭಿವೃದ್ಧಿಗೆ ಸಹಕಾರಿಯಾಗಲಿವೆ. ಆರ್ಥಿಕ ಚಟುವಟಿಕೆಗಳಿಗೆ ಮತ್ತಷ್ಟು ಪ್ರೋತ್ಸಾಹ ಇದರಿಂದ ದೊರೆಯಲಿದ್ದು, ನೆರೆ ರಾಜ್ಯಗಳಾದ ಉತ್ತರ ಪ್ರದೇಶ, ಜಾರ್ಖಂಡ್‌ಗೂ ಸಹಕಾರಿಯಾಗಲಿವೆ’ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT