ಹೈದರಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿ ಏಪ್ರಿಲ್ 8ರಂದು ಹೈದರಾಬಾದ್‌ಗೆ ಭೇಟಿ ನೀಡಲಿದ್ದು, ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಜಿ. ಕಿಶನ್ ರೆಡ್ಡಿ ಶನಿವಾರ ತಿಳಿಸಿದ್ದಾರೆ.
ಭೇಟಿಯ ವೇಳೆ ಮೋದಿ ಹೈದರಾಬಾದ್ ಮತ್ತು ತಿರುಪತಿ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ. ಇದು ತೆಲುಗು ರಾಜ್ಯಗಳಿಗೆ ಸೇವೆ ಸಲ್ಲಿಸುತ್ತಿರುವ ಎರಡನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಇದಾಗಲಿದೆ.
ಸಿಕಂದರಾಬಾದ್ ರೈಲು ನಿಲ್ದಾಣದಲ್ಲಿ ನಡೆಯುವ ಉದ್ಘಾಟನೆ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಹೈದರಾಬಾದ್ ಮತ್ತು ತಿರುಪತಿ ನಡುವೆ ರೈಲಿನಲ್ಲಿ ಪ್ರಯಾಣಿಸುವವರಿಗೆ ತಡೆರಹಿತ ಸೇವೆಗಳನ್ನು ಒದಗಿಸಲಿದೆ ಎಂದು ರೆಡ್ಡಿ ಹೇಳಿದ್ದಾರೆ.
ಹೈದರಾಬಾದ್ ಮತ್ತು ತಿರುಪತಿ ನಡುವಿನ ಹೆಚ್ಚಿನ ರೈಲುಗಳು 11 ಗಂಟೆಗಳಿಗಿಂತ ಹೆಚ್ಚು ಸಮಯವನ್ನು ತೆಗೆದುಕೊಂಡರೆ, ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಒಂಬತ್ತು ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಪ್ರಯಾಣವನ್ನು ಪೂರ್ಣಗೊಳಿಸುತ್ತದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.