ಶನಿವಾರ, ಅಕ್ಟೋಬರ್ 1, 2022
20 °C

ಅಬೆ ಅಂತ್ಯಕ್ರಿಯೆ: ಇದೇ 27ರಂದು ಜಪಾನ್‌ಗೆ ತೆರಳಲಿರುವ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಜುಲೈನಲ್ಲಿ ಹಂತಕನ ಗುಂಡಿಗೆ ಬಲಿಯಾದ ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಇದೇ 27ರಂದು ಜಪಾನ್‌ಗೆ ತೆರಳಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಅಬೆ ಅವರು ಜಪಾನ್‌ನ ದೀರ್ಘಾವಧಿಯ ಪ್ರಧಾನಿ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಜುಲೈ 8ರಂದು ಅಬೆ ಅವರು ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದ ವೇಳೆ, ಅವರ ಮೇಲೆ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿದ್ದ.‌

ಅಂತ್ಯಕ್ರಿಯೆಯಲ್ಲಿ ಭಾಗಿಯಾದ ನಂತರ ಮೋದಿ ಅವರು, ಜಪಾನ್‌ನ ಪ್ರಧಾನಿ ಫುಮಿಯೊ ಕಿಶಿದಾ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಲಿದ್ದಾರೆ ಎಂದೂ ಸಚಿವಾಲಯ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು