ಭಾನುವಾರ, ಮೇ 22, 2022
23 °C

ಮೇ 16ರಂದು ನೇಪಾಳದ ಲುಂಬಿಣಿಗೆ ಮೋದಿ ಭೇಟಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಬುದ್ಧ ಪೌರ್ಣಿಮೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೇ 16ರಂದು ನೇಪಾಳದ ಲುಂಬಿಣಿಗೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ನೇಪಾಳದ ಪ್ರಧಾನಿ ಶೇರ್‌ ಬಹದ್ದೂರ್‌ ದೇವುಬಾ ಅವರ ಆಹ್ವಾನದ ಮೇರೆಗೆ ಮೋದಿ ಲುಂಬಿಣಿಗೆ ಹೋಗುತ್ತಿದ್ದು, 2014ರ ಬಳಿಕ ಮೋದಿ ನೇಪಾಳಕ್ಕೆ ನೀಡುತ್ತಿರುವ ಐದನೇ ಭೇಟಿ ಇದಾಗಿದೆ.

‘ಮೋದಿಯವರು ಲುಂಬಿಣಿಯ ಪವಿತ್ರ ಮಾಯಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಬಳಿಕ ನೇಪಾಳ ಸರ್ಕಾರದ ಆಶ್ರಯದಲ್ಲಿ ಲುಂಬಿಣಿ ಅಭಿವೃದ್ಧಿ ಟ್ರಸ್ಟ್‌ ವತಿಯಿಂದ ಏರ್ಪಡಿಸಲಿರುವ ಬುದ್ಧ ಜಯಂತಿ ಕಾರ್ಯಕ್ರಮದಲ್ಲಿ ಭಾಷಣ ಮಾಡಲಿದ್ದಾರೆ’ ಎಂದು ಸಚಿವಾಲಯ ಮಾಹಿತಿ ನೀಡಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು