ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗ ಮಹೋತ್ಸವದಲ್ಲಿ ಪಾಲ್ಗೊಳ್ಳಿ: ನರೇಂದ್ರ ಮೋದಿ

Last Updated 13 ಮಾರ್ಚ್ 2023, 10:36 IST
ಅಕ್ಷರ ಗಾತ್ರ

ನವದೆಹಲಿ: ಅಂತರರಾಷ್ಟ್ರೀಯ ಯೋಗ ದಿನಾಚರಣೆ ನೆನಪಿಸುವ ಮೂರು ದಿನಗಳ ಯೋಗ ಮಹೋತ್ಸವವನ್ನು ಉತ್ಸಾಹದಿಂದ ಆಚರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಜನರಿಗೆ ಕರೆ ನೀಡಿದರು.

ಮೂರು ದಿನಗಳ ಯೋಗ ಮಹೋತ್ಸವವು ಮಾರ್ಚ್ 13 ಮತ್ತು14 ರಂದು ದೆಹಲಿಯಲ್ಲಿನ ತಾಲ್ಕಟೋರಾ ಕ್ರೀಡಾಂಗಣದಲ್ಲಿ ಹಾಗೂ ಮಾರ್ಚ್ 15 ರಂದು ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯಲ್ಲಿ ನಡೆಯಲಿದೆ.

ಯೋಗ ಮಹೋತ್ಸವದ ಕುರಿತು ಕೇಂದ್ರ ಆಯುಷ್ ಸಚಿವಾಲಯದ ಟ್ವೀಟ್ ಹಂಚಿಕೊಂಡಿರುವ ಪ್ರಧಾನಿ, ‘ಯೋಗ ದಿನಾಚರಣೆಗೆ ನೂರು ದಿನಗಳು ಬಾಕಿ ಇದ್ದು, ಅದನ್ನು ಉತ್ಸಾಹದಿಂದ ಆಚರಿಸುವಂತೆ ಕೋರುತ್ತೇನೆ. ಯೋಗವನ್ನು ನಿಮ್ಮ ಜೀವನದ ಒಂದು ಭಾಗವಾಗಿ ಮಾಡಿಕೊಳ್ಳಿ’ ಎಂದು ಹೇಳಿದ್ದಾರೆ.

2015 ರಿಂದ ಪ್ರತಿವರ್ಷ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT