ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಿ: ಮೇಘಾಲಯ, ನಾಗಾಲ್ಯಾಂಡ್ ಜನತೆಗೆ ಮೋದಿ ಕರೆ

Last Updated 27 ಫೆಬ್ರುವರಿ 2023, 5:36 IST
ಅಕ್ಷರ ಗಾತ್ರ

ನವದೆಹಲಿ: ದಾಖಲೆ ಸಂಖ್ಯೆಯ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ, ಮೇಘಾಲಯ ಮತ್ತು ನಾಗಾಲ್ಯಾಂಡ್ ಜನರಿಗೆ ಕರೆ ನೀಡಿದ್ದಾರೆ.

ಮೇಘಾಲಯ, ನಾಗಾಲ್ಯಾಂಡ್‌ ವಿಧಾನಸಭೆ ಚುನಾವಣೆಯ ಮತದಾನ ಆರಂಭವಾಗಿದ್ದು, ಸಂಜೆ 4 ಗಂಟೆಯವರೆಗೆ ನಡೆಯಲಿದೆ.

60 ಕ್ಷೇತ್ರಗಳಿರುವ ಎರಡೂ ರಾಜ್ಯಗಳಲ್ಲೂ ತಲಾ 59 ಕ್ಷೇತ್ರಗಳಿಗೆ ಮಾತ್ರ ಮತದಾನ ನಡೆಯುತ್ತಿದೆ. ನಾಗಾಲ್ಯಾಂಡ್‌ನ ಕ್ಷೇತ್ರವೊಂದರಲ್ಲಿ ಪ್ರತಿಸ್ಪರ್ಧಿ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದುಕೊಂಡ ಕಾರಣ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇಘಾಲಯದ ಶಿಲ್ಲಾಂಗ್‌ ವಿಧಾನಸಭಾ ಕ್ಷೇತ್ರದ ಯುನೈಟೆಡ್‌ ಡೆಮಾಕ್ರೆಟಿಕ್‌ ಪಕ್ಷದ ಅಭ್ಯರ್ಥಿಎಚ್‌.ಡಿ.ಆರ್. ಲಿಂಗ್ಡೊ ಅವರು ಮೃತಪಟ್ಟಿರುವುದರಿಂದ ಆ ಕ್ಷೇತ್ರದ ಮತದಾನವನ್ನು ಮುಂದೂಡಲಾಗಿದೆ. ಎರಡೂ ರಾಜ್ಯಗಳಲ್ಲೂ ಉಗ್ರರ ದಾಳಿಯ ಭೀತಿ ಇರುವುದರಿಂದ ಬಿಗಿಭದ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

'ಮೇಘಾಲಯ ಮತ್ತು ನಾಗಾಲ್ಯಾಂಡ್‌ನ ಜನರನ್ನು, ವಿಶೇಷವಾಗಿ ಯುವ ಮತ್ತು ಮೊದಲ ಬಾರಿಗೆ ಮತದಾನ ಮಾಡುತ್ತಿರುವವರನ್ನು ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಒತ್ತಾಯಿಸುತ್ತಿದ್ದೇನೆ’ ಎಂದ ಮೋದಿ ಟ್ವೀಟ್ ಮಾಡಿದ್ದಾರೆ.

ಮಾರ್ಚ್ 2ರಂದು ಎರಡೂ ರಾಜ್ಯಗಳಲ್ಲಿ ಮತ ಎಣಿಕೆ ನಡೆದು, ಫಲಿತಾಂಶ ಹೊರಬೀಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT