ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಂಭ ಮೇಳ ಸಾಂಕೇತಿಕವಾಗಿ ನಡೆಯಲಿ: ಪ್ರಧಾನಿ ಮೋದಿ

Last Updated 17 ಏಪ್ರಿಲ್ 2021, 7:33 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭ ಮೇಳ ಈಗ ಸಾಂಕೇತಿಕವಾಗಿ ನಡೆಯಲಿ ಎಂದು ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ.

‘ಜುನಾ ಅಖಾಡದ ಸ್ವಾಮಿ ಅವಧೇಶಾನಂದ ಗಿರಿ ಜತೆ ದೂರವಾಣಿ ಮೂಲಕ ಕುಂಭ ಮೇಳದ ಕುರಿತು ಮಾತುಕತೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸಂತರ ಆರೋಗ್ಯದ ಬಗ್ಗೆ ವಿಚಾರಿಸಿದ್ದೇನೆ. ಹಲವು ಸಂತರು ಸೋಂಕಿಗೆ ಒಳಗಾಗಿದ್ದಾರೆ. ಸ್ಥಳೀಯ ಆಡಳಿತದೊಂದಿಗೆ ಸಂತರು ಸಹಕರಿಸಿರುವುದು ಶ್ಲಾಘನೀಯ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

‘ಎರಡು ಶಾಹಿ ಸ್ನಾನಗಳು (ಪವಿತ್ರ ಸ್ನಾನ) ನಡೆದಿವೆ. ಹೀಗಾಗಿ, ಈಗ ಕುಂಭವು ಸಾಂಕೇತಿಕಿಕವಾಗಿ ನಡೆಯಲಿ. ಇದರಿಂದ, ಪ್ರಸ್ತುತ ಎದುರಾಗಿರುವ ಬಿಕ್ಕಟ್ಟಿನ ವಿರುದ್ಧ ಹೋರಾಟ ನಡೆಸಲು ಸಹಕಾರಿಯಾಗುತ್ತದೆ’ ಎಂದು ಹೇಳಿದ್ದಾರೆ.

ಮೋದಿ ಅವರು ಕರೆಯ ಬಳಿಕ ಪ್ರತಿಕ್ರಿಯಿಸಿರುವ ಅವಧೇಶಾನಂದ ಅವರು, ಕೋವಿಡ್‌–19 ಪರಿಸ್ಥಿತಿಯಿಂದ ಕುಂಭ ಮೇಳಕ್ಕೆ ಯಾರೂ ಬರಬಾರದು ಎಂದು ಕೋರಿದ್ದಾರೆ.

ತಮ್ಮ ಜೀವ ಮತ್ತು ಇತರರ ಜೀವ ಉಳಿಸುವುದೇ ಪವಿತ್ರ ಕಾರ್ಯವಾಗಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT