ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಪತಿ ಚುನಾವಣೆಯಲ್ಲಿ ಜಯ; ದ್ರೌಪದಿ ಮುರ್ಮು ಅಭಿನಂದಿಸಿದ ಪ್ರಧಾನಿ ಮೋದಿ

Last Updated 21 ಜುಲೈ 2022, 15:42 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಜಯ ಗಳಿಸಿರುವ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಧಾನಿ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ದ್ರೌಪದಿ ಮುರ್ಮು ತಂಗಿರುವ ನಿವಾಸಕ್ಕೆ ಭೇಟಿಯಾಗಿ ಹೂಗುಚ್ಛ ನೀಡಿ ಅಭಿನಂದಿಸಿದ್ದಾರೆ.

ಮೂರನೇ ಸುತ್ತಿನ ಮತ ಎಣಿಕೆಯ ಬಳಿಕ ಒಟ್ಟು ಮತಗಳ ಅರ್ಧದಷ್ಟು ಮತಗಳನ್ನು ದ್ರೌಪದಿ ಮುರ್ಮು ಗಳಿಸಿರುವುದಾಗಿ ಚುನಾವಣಾ ಅಧಿಕಾರಿ ಪಿ.ಸಿ. ಮೋದಿ ಘೋಷಿಸಿದ್ದಾರೆ. ಇದರಿಂದ ಗೆಲುವು ಬಹುತೇಕ ನಿಚ್ಚಳಗೊಂಡಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ.

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು, ರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆಯಾದ ಬುಡಕಟ್ಟು ಜನಾಂಗದ ಮೊದಲ ಮಹಿಳೆ ಎಂದೆನಿಸಿಕೊಳ್ಳಲಿದ್ದಾರೆ.

ಗುರುವಾರ ನಡೆಯುತ್ತಿರುವ ಮತ ಎಣಿಕೆಯಲ್ಲಿ ದ್ರೌಪದಿ ಮುರ್ಮು ಅವರು ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರನ್ನು ಸೋಲಿಸುವುದು ಬಹುತೇಕ ಖಚಿತಗೊಂಡಿದೆ.

ಅಲ್ಲದೆ ದೇಶದೆಲ್ಲೆಡೆ ದ್ರೌಪದಿ ಮುರ್ಮು ಬೆಂಬಲಿಗರಲ್ಲಿ ಸಂಭ್ರಮ ಮನೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT