ಕಾಂಗ್ರೆಸ್ ಮುಖಂಡೆ ಹಾಗೂ ರಾಜಕೀಯ ಎದುರಾಳಿ ಸೋನಿಯಾ ಗಾಂಧಿ ಅವರಿಗೆ ಪ್ರಧಾನಿ ಮೋದಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

‘ಸೋನಿಯಾ ಗಾಂಧಿ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು. ಭಗವಂತ ದೀರ್ಘಾಯುಷ್ಯ ಮತ್ತು ಆರೋಗ್ಯ ಕರುಣಿಸಲಿ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ರಣ್‌ಥಾಂಬೋರ್‌ನಲ್ಲಿ ಸೋನಿಯಾ ತಮ್ಮ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಪ್ರಿಯಾಂಕ ಗಾಂಧಿ ಮತ್ತು ರಾಹುಲ್ ಗಾಂಧಿ ಕೂಡ ತಾಯಿಯ ಹುಟ್ಟು ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಲಿದ್ದಾರೆ. ಭಾರತ್ ಜೋಡೊ ಯಾತ್ರೆಗೆ ಇಂದು ವಿರಾಮ ನೀಡಲಾಗಿದೆ.

ಭಾರತ್ ಜೋಡೊ ಯಾತ್ರೆ ರಾಜಸ್ಥಾನದಲ್ಲಿದೆ. ಹೀಗಾಗಿ ಸೋನಿಯಾ ಗುರುವಾರ ಜೈಪುರಕ್ಕೆ ಬಂದಿಳಿದಿದ್ದಾರೆ. ಮಧ್ಯಾಹ್ನ ಹೆಲಿಕಾಫ್ಟರ್‌ನಲ್ಲಿ ಸವೈ ಮಧೋಪುರ್‌ಗೆ ತೆರಳಿದ್ದಾರೆ. ಅಲ್ಲಿಂದ ರಣ್‌ಥಾಂಬೋರ್‌ನ ಶೇರ್ ಭಾಗ್ ಹೋಟೆಲ್‌ನಲ್ಲಿ ಸೋನಿಯಾ ತಂಗಿದ್ದು, ಅಲ್ಲಿಯೇ ಹುಟ್ಟು ಹಬ್ಬದ ಆಚರಣೆ ನಡೆಯಲಿದೆ. ಸ್ಥಳೀಯ ಆಡಳಿತ ಹಾಗೂ ಪಕ್ಷದ ಮುಖಂಡರು ಸಂಭ್ರಮಕ್ಕೆ ಅಗತ್ಯ ಸಿದ್ಧತೆ ನಡೆಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಮುಖಂಡರು ಸಂಭ್ರಮದಲ್ಲಿ ಭಾಗಿಯಾಗಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.