ಮಂಗಳವಾರ, ಜೂನ್ 22, 2021
24 °C

ನಮ್ಮ ಭೂಮಿ ವಶಪಡಿಸಿಕೊಳ್ಳಲು ಚೀನಾಕ್ಕೆ ಅವಕಾಶ ನೀಡಿದ್ದು ಮೋದಿ ಹೇಡಿತನ: ರಾಹುಲ್‌

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ದೆಹಲಿ: ‘ಎಲ್ಲರೂ ಭಾರತೀಯ ಸೇನೆಯ ಸಾಮರ್ಥ್ಯ ಮತ್ತು ಶೌರ್ಯದ ಮೇಲೆ ವಿಶ್ವಾಸವಿರಿಸಿದ್ದಾರೆ. ಪ್ರಧಾನಿಯನ್ನು ಹೊರತುಪಡಿಸಿ...’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಭಾನುವಾರ ಟ್ವೀಟ್‌ ಮಾಡಿದ್ದಾರೆ.

ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದ ಹೆಸರು ಪ್ರಸ್ತಾಪಿಸದೇ, ಆ ದೇಶದ ವಿರುದ್ಧ ವಾಗ್ದಾಳಿ ಮಾಡಿದ್ದರು. ‘ಭಾರತದ ಸಾರ್ವಭೌಮತ್ವದ ಮೇಲೆ ಕಣ್ಣುಹಾಕಿದವರಿಗೆ ಭಾರತೀಯ ಸೇನೆ, ಗಡಿ ನಿಯಂತ್ರಣಾ ರೇಖೆ (ಪಾಕಿಸ್ತಾನ), ವಾಸ್ತವ ಗಡಿ ನಿಯಂತ್ರಣಾ ರೇಖೆ (ಚೀನಾ) ಉದ್ದಕ್ಕೂ ತನ್ನದೇ ಭಾಷೆಯಲ್ಲಿ ಉತ್ತರಿಸಿದೆ. ಲಡಾಖ್‌ನಲ್ಲಿ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ,’ ಎಂದು ಹೇಳಿದ್ದರು.

ಈ ಕುರಿತು ಇಂದು ಟ್ವೀಟ್‌ ಮೂಲಕ ವಾಗ್ದಾಳಿ ಮಾಡಿರುವ ರಾಹುಲ್‌ ಗಾಂಧಿ, ‘ಸೇನೆಯ ಸಾಮರ್ಥ್ಯವನ್ನು ಎಲ್ಲರೂ ನಂಬಿದ್ದಾರೆ. ಆದರೆ, ಮೋದಿಯವರನ್ನು ಬಿಟ್ಟು. ನಮ್ಮ ಭೂಮಿಯನ್ನು ವಶಪಡಿಸಿಕೊಳ್ಳಲು ಮೋದಿಯವರ ಹೇಡಿತನವು ಚೀನಾಕ್ಕೆ ಅವಕಾಶ ಮಾಡಿಕೊಟ್ಟಿದೆ’ ಎಂದು ಟೀಕಾಪ್ರಹಾರ ಮಾಡಿದ್ದಾರೆ.

ಇದಕ್ಕೂ ಹಿಂದೆ, ಪ್ರಧಾನಿ ಮೋದಿ ಭಾಷಣದ ಬೆನ್ನಿಗೇ ಪ್ರತಿಕ್ರಿಯಿಸಿದ ಕಾಂಗ್ರೆಸ್‌ನ ವಕ್ತಾರ ರಣದೀಪ್‌ ಸುರ್ಜೆವಾಲ, ‘ಭಾರತದ ಭೂಪ್ರದೇಶಕ್ಕೆ ಅತಿಕ್ರಮ ಪ್ರವೇಶ ಮಾಡಿದ ಚೀನಾ ಹೆಸರು ಹೇಳಲು ಅಧಿಕಾರದಲ್ಲಿ ಕುಳಿತವರು ಏಕೆ ಹೆದರುತ್ತಾರೆ. ಭಾರತೀಯ ಸಶಸ್ತ್ರ ಪಡೆಗಳ ಬಗ್ಗೆ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತ ಮತ್ತು ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುತ್ತಾನೆ,’ ಎಂದು ಹೇಳಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು