ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಮೋದಿ ಮುಂಬೈ ಭೇಟಿ: ಫೆ.10ರಂದು ಡ್ರೋನ್‌ ಸೇರಿ ಹಾರುವ ವಸ್ತು ನಿಷೇಧ

Last Updated 6 ಫೆಬ್ರುವರಿ 2023, 9:58 IST
ಅಕ್ಷರ ಗಾತ್ರ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಫೆ.10ರಂದು ನಗರಕ್ಕೆ ಭೇಟಿ ನೀಡುತ್ತಿದ್ದು, ಭದ್ರತಾ ದೃಷ್ಟಿಯಿಂದ ಅಂದು ಡ್ರೋನ್‌, ಪ್ಯಾರಾಗ್ಲೈಡರ್‌, ಎಲ್ಲಾ ರೀತಿಯ ಬಲೂನ್‌ಗಳು ಮತ್ತು ರಿಮೋಟ್ ಕಂಟ್ರೋಲ್ ಮೈಕ್ರೋಲೈಟ್ ವಿಮಾನಗಳ ಹಾರಾಟವನ್ನು ನಿಷೇಧಿಸಲಾಗಿದೆ.

ಫೆಬ್ರವರಿ 10 ರಂದು ಮುಂಬೈ-ಸೋಲಾಪುರ ಮತ್ತು ಮುಂಬೈ-ಶಿರಡಿ ಮಾರ್ಗಗಳಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಪ್ರಧಾನಿ ಭೇಟಿ ದಿನ ಭದ್ರತಾ ದೃಷ್ಟಿಯಿಂದ ಬಾನೆತ್ತರಕ್ಕೆ ಹಾರುವ ಎಲ್ಲ ಬಗೆಯ ವಸ್ತುಗಳ ಹಾರಾಟ ನಿಷೇಧಿಸಿ ಉಪ ಪೊಲೀಸ್ ಆಯುಕ್ತರು ಸೋಮವಾರ ಆದೇಶ ಹೊರಡಿಸಿದ್ದಾರೆ.

ವಿಮಾನ ನಿಲ್ದಾಣ ಸುತ್ತಲಿನ ಪ್ರದೇಶ, ಸಹರ್, ಕೊಲಾಬಾ, ಮಾತಾ ರಮಾಬಾಯಿ ಅಂಬೇಡ್ಕರ್ ಮಾರ್ಗ, ಎಂಐಡಿಸಿ ಸೇರಿದಂತೆ ಪ್ರಧಾನಿ ಸಂಚರಿಸುವ ಬಹುತೇಕ ಪ್ರದೇಶಗಳಲ್ಲಿ ಈ ನಿಷೇಧ ಜಾರಿಯಲ್ಲಿರಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಭಾಗವಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT